ಜೇಟ್ಲಿ ಮಾನನಷ್ಟ ಮೊಕದ್ದಮೆ: ಕೇಜ್ರಿವಾಲ್ ಹಾಗೂ ಇತರೆ ಐವರಿಗೆ ಸಮನ್ಸ್
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ದೆಹಲಿ...

Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಇತರೆ ಐವರು ಆಮ್ ಆದ್ಮಿ ಪಕ್ಷದ ನಾಯಕರಿಗೆ ಬುಧವಾರ ಸಮನ್ಸ್ ಜಾರಿ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಸುಮಿತ್ ದಾಸ್ ಅವರು, ಕೇಜ್ರಿವಾಲ್, ಕುಮಾರ್ ವಿಶ್ವಾಸ್, ಆಶುತೋಷ್ ಸಂಜಯ್ ಸಿಂಗ್, ರಾಘವ್ ಚಡ್ಡಾ ಹಾಗೂ ದೀಪಕ್ ಬಾಜಪೇಯಿ ಅವರಿಗೆ ಏಪ್ರಿಲ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ಹಗರಣದಲ್ಲಿ ತಮ್ಮ ಪಾತ್ರವಿದೆ ಎಂದು ಆರೋಪಿಸಿದ್ದ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಆಪ್ ನಾಯಕರ ವಿರುದ್ಧ ಅರುಣ್ ಜೇಟ್ಲಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ಕಳೆದ ಜನವರಿ 5ರಂದು ವಿಚಾರಣೆಗೆ ಹಾಜರಾಗಿದ್ದ ಜೇಟ್ಲಿ, ಡಿಡಿಸಿಎ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


