ಕಾಶ್ಮೀರದಲ್ಲಿ ಉಗ್ರರು- ಸೇನೆ ನಡುವೆ ಗುಂಡಿನ ಚಕಮಕಿ
ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು- ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವರೆಗೂ ಪ್ರಾಣ ಹಾನಿ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಶ್ರೀನಗರ: ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು- ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವರೆಗೂ ಪ್ರಾಣ ಹಾನಿ ಬಗ್ಗೆ ಮಾಹಿತಿ ಲಭ್ಯವಿಲ್ಲ.
ಭದ್ರತಾ ಪಡೆಗಳು ಉಗ್ರರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದು ಉಗ್ರರು ತಪ್ಪಿಸಿಕೊಳ್ಳದಂತೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. " ಗುಂಡಿನ ಕಾರ್ಯಾಚರಣೆ ನಡೆದ ವರದಿಯಾಗುತ್ತಿದ್ದಂತೆಯೇ ಪೊಲೀಸ್ ಪಡೆಯ ಸಹಾಯ ಪಡೆದು ಉಗ್ರರು ತಪ್ಪಿಸಿಕೊಳ್ಳದಂತೆ ಪ್ರದೇಶವನ್ನು ಸುತ್ತುವರೆಯಲಾಗಿದೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳು ಸುತ್ತುವರೆದಿರುವ ಪ್ರದೇಶದಲ್ಲಿ 3 -4 ಉಗ್ರರು ಅಡಗಿದ್ದಾರೆ ಎಂದು ಶಂಕಿಸಲಾಗಿದ್ದು ಗುಂಡಿನ ಚಕಮಕಿ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


