ರಾಹುಲ್ ಫೇರ್ ಆ್ಯಂಡ್ ಲವ್ಲಿ ಹೇಳಿಕೆಗೆ ಜೇಟ್ಲಿ ತಿರುಗೇಟು
ಕೇಂದ್ರ ಸರ್ಕಾರದ ಕುರಿತು ಫೇರ್ ಆ್ಯಂಡ್ ಲವ್ಲಿ ಎಂದು ಟೀಕಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕಿಡಿಕಾರಿದ್ದಾರೆ...

ನವದೆಹಲಿ: ಕೇಂದ್ರ ಸರ್ಕಾರದ ಕುರಿತು ಫೇರ್ ಆ್ಯಂಡ್ ಲವ್ಲಿ ಎಂದು ಟೀಕಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕಿಡಿಕಾರಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿ ಮಾತನಾಡಿದ ಅವರು, ಕಪ್ಪು ಹಣವನ್ನು ಹಿಂತಿರುಗಿ ತರುವ ಯೋಜನೆ ಕ್ಷಮಾದಾನ ಯೋಜೆಯಲ್ಲ. ಇದೊಂದು ದಂಡ ವಿಧಿಸುವ ಯೋಜನೆಯಾಗಿದೆ ಎಂದು ಹೇಳಿದ್ದಾರೆ.
ಅಸ್ಸಾಂ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕಪ್ಪು ಹಣ ವಾಪಸ್ ನೀತಿ ಕುರಿತಂತೆ ಟೀಕೆ ವ್ಯಕ್ತಪಡಿಸಿದ್ದ ರಾಹುಲ್ ಗಾಂಧಿಯವರು ಫೇರ್ ಆ್ಯಂಡ್ ಲವ್ಲಿ ಸ್ಕೀಮ್ ನಂತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಇದೀಗ ಅರುಣ್ ಜೇಟ್ಲಿ ಅವರು ತಿರುಗೇಟು ನೀಡಿದ್ದಾರೆ. 1997ರಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದ ವೇಳೆ ಇಂಥಹುದೇ ಯೋಜನೆ ಜಾರಿಗೆ ತರಲಾಗಿತ್ತು. ಅದರ ಟ್ರ್ಯಾಕ್ ರೆಕಾರ್ಡ್ ಒಮ್ಮೆ ಗಮನಿಸಿ ನೋಡಿ. ಕಪ್ಪು ಹಣವನ್ನು ಸಕ್ರಮಗೊಳಿಸಲು ಶೇ.30 ರಷ್ಟು ತೆರಿಗೆ ಹಾಗೂ ಶೇ.50 ರಷ್ಟು ದಂಡ ವಿಧಿಸಲಾಗುತ್ತಿದೆ.
ಪ್ರತಿಯೊಂದು ವಿಷಯಕ್ಕೂ ಟೀಕೆ ಮಾಡುವ ಮೊದಲು ನಿಮ್ಮ ಸರ್ಕಾರ ಏನು ಮಾಡಿತ್ತು ಎಂಬುದನ್ನು ರಾಹುಲ್ ನೆನಪಿಸಿಕೊಳ್ಳಬೇಕು. ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದವರನ್ನು ಸುಳ್ಳು ಆರೋಪ ಹೊರಿಸಿ ಜೈಲಿಗೆ ಕಳುಹಿಸಲಾಯಿತೆಂದು ಟೀಕಿಸಿದರು.
ಇದೇ ವೇಳೆ ಜೆಎನ್ ಯು ಪ್ರಕರಣ ಸಂಬಂಧ ರಾಹುಲ್ ನೀಡಿದ್ದ ಟೀಕೆಗಳಿಗೆ ಉತ್ತರ ನೀಡಿರುವ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶವಿಭಜನೆ ಬಗ್ಗೆ ಮಾತನಾಡಲು ಯಾವುದೇ ಕಾರಣಕ್ಕೂ ಅವಕಾಶವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


