ದೇಶ

ಮಲ್ಯ ವಿದೇಶಕ್ಕೆ ಹಾರಿದ್ದಾರೆ; ಸುಪ್ರೀಂಗೆ ಕೇಂದ್ರ ಮಾಹಿತಿ

ಸಾಲದ ಸುಳಿಯಲ್ಲಿ ಸಿಲುಕಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ಭಾರತವನ್ನು ತೊರೆದು ವಿದೇಶಕ್ಕೆ ಹಾರಿದ್ದಾರೆಂಬ ಸ್ಪೋಟಕ ಮಾಹಿತಿಯೊಂದು ಹೊರ ಬಂದಿದೆ...

ಮಲ್ಯ ವಿದೇಶಕ್ಕೆ ಹಾರಿದ್ದಾರೆ; ಸುಪ್ರೀಂಗೆ ಕೇಂದ್ರ ಮಾಹಿತಿ
ವಿಜಯ್ ಮಲ್ಯ
Published On :

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ಭಾರತವನ್ನು ತೊರೆದು ವಿದೇಶಕ್ಕೆ ಹಾರಿದ್ದಾರೆಂಬ ಸ್ಪೋಟಕ ಮಾಹಿತಿಯೊಂದು ಹೊರ ಬಂದಿದೆ.

ಈ ಕುರಿತಂತೆ ಸರ್ಕಾರಿ ನ್ಯಾಯಮೂರ್ತಿ ಮುಕುಲ್ ರೊಹ್ಟಗಿ ಮಾಹಿತಿ ನೀಡಿದ್ದು, ಮಾರ್ಚ್ 2 ರಂದು ಮಲ್ಯ ಅವರು ಭಾರತ ತೊರೆದು ವಿದೇಶಕ್ಕೆ ಹಾರಿದ್ದಾರೆಂದು ಕೇಂದ್ರ ಗುಪ್ತಚರ ಇಲಾಖೆ ಸಿಬಿಐ  ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಮಲ್ಯ ಅವರು ಲಂಡನ್ ನಲ್ಲಿರುವ ತಮ್ಮ ಮಕ್ಕಳ ಸಹಾಯದಿಂದ ಭಾರತ ತೊರೆದಿರಬಹುದು ಎಂದು ಹೇಳಲಾಗುತ್ತಿದ್ದು, ಈ ಸಂಬಂಧಿಸಿ ಇಲ್ಲಿಯವರೆಗೆ ಯಾವುದೇ ಸ್ಪಷ್ಟ ಮಾಹಿತಿಗಳು  ಲಭ್ಯವಾಗಿಲ್ಲ.

ಮಲ್ಯ ಅವರು ದೇಶದಲ್ಲಿ ಇಲ್ಲ ಎಂಬುದು ನಮ್ಮ ಅರಿವಿಗೆ ಬಂದಿದೆ. ಅಗತ್ಯ ಬಿದ್ದರೆ ಅವರನ್ನು ಹುಡುಕುವ ಪ್ರಯತ್ನವನ್ನು ಅಧಿಕಾರಿಗಳು ಮಾಡುತ್ತಾರೆಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದೆರಡು ದಿನಗಳ ಹಿಂದಷ್ಟೇ ಸಾರ್ವಜನಿಕ ವಲಯದ ಬ್ಯಾಂಕುಗಳು ಮಲ್ಯ ಅವರು ಭಾರತ ಬಿಟ್ಟು ಹೋಗದಂತೆ ತಡೆಯಲು ಸುಪ್ರೀಂನಲ್ಲಿ ಅರ್ಜಿಯೊಂದನ್ನು ದಾಖಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ  ನಡೆಸುವುದಾಗಿ ತಿಳಿಸಿದ್ದ ನ್ಯಾಯಾಲಯವು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮಲ್ಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.