ದೇಶ

ಚೆನ್ನೈನಲ್ಲಿ ಪತ್ನಿ-ಮಕ್ಕಳಿಬ್ಬರ ಕತ್ತು ಸೀಳಿ ತಾನು ಆತ್ಮಹತ್ಯೆ ಮಾಡಿಕೊಂಡ ಪತಿ

ವ್ಯವಹಾರದಲ್ಲಿ ಉಂಟಾದ ನಷ್ಟದಿಂದಾಗಿ ಎದೆಗುಂದಿದ 35 ವರ್ಷದ ವ್ಯಕ್ತಿಯೊಬ್ಬ ಪತ್ನಿ ಹಾಗೂ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ...

ಚೆನ್ನೈನಲ್ಲಿ ಪತ್ನಿ-ಮಕ್ಕಳಿಬ್ಬರ ಕತ್ತು ಸೀಳಿ ತಾನು ಆತ್ಮಹತ್ಯೆ ಮಾಡಿಕೊಂಡ ಪತಿ
ಅಪರಾಧ
Published On :

ಚೆನ್ನೈ: ವ್ಯವಹಾರದಲ್ಲಿ ಉಂಟಾದ ನಷ್ಟದಿಂದಾಗಿ ಎದೆಗುಂದಿದ 35 ವರ್ಷದ ವ್ಯಕ್ತಿಯೊಬ್ಬ ಪತ್ನಿ ಹಾಗೂ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚೆನ್ನೈನ ಗೋವಿಂದಪ್ಪ ನಾಯ್ಕರ್ ಸ್ಟೀಟ್ ನಲ್ಲಿ ನಡೆದಿದೆ.

ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿ ಭಾರೀ ನಷ್ಟ ಉಂಟಾಗಿದ್ದರಿಂದ ಖಿನ್ನತೆಗೊಳಗಾಗ ದೇವೇಂದ್ರ ಕುಮಾರ್ ಎಂಬುವರು ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಆತ್ಮಹತ್ಯೆ ಪತ್ರ ಬರೆದಿಟ್ಟು ಪತ್ನಿ ಹಾಗೂ ಮಕ್ಕಳಿಬ್ಬರಿಗೂ ಊಟದಲ್ಲಿ ವಿಷ ಊಣಿಸಿ ನಂತರ ಮೂವರ ಕತ್ತು ಸೀಳಿ ಕೊಂದು ಬಳಿಕ ತಾನು ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೋನ್ ಕರೆಗೆ ಸ್ಪಂಧಿಸದಿದ್ದರಿಂದ ಬೆಳಗ್ಗೆ ಸಂಬಂಧಿಕರ ಬಂದು ಬಾಗಿಲು ಮುರಿದು ಒಳಗೆ ನೋಡಿದಾಗ ಈ ಹೃದಯ ವಿದ್ರಾವಕ ಘಟನೆ ಬಯಲಿಗೆ ಬಂದಿದೆ. ಕೂಡಲೇ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರನ್ನು 30 ವರ್ಷದ ಕೀರ್ತಿ, ಮಕ್ಕಳಾದ 15 ವರ್ಷದ ಶೃತಿ ಮತ್ತು 10 ವರ್ಷದ ಮೋನತ್ ಎಂದು ಗುರುತಿಸಲಾಗಿದೆ. ಮೂವರು ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಪೊಲೀಸರು ಶವಗಳನ್ನು ವಶಪಡಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.