ದೇಶ

ಗೋಹತ್ಯೆ ನಿಷೇಧ ಬಗ್ಗೆ ಮಾತಾಡಿದರೆ ಕೆಲಸ ಹೋಗಬಹುದು: ಅರವಿಂದ ಸುಬ್ರಹ್ಮಣ್ಯನ್

ಗೋಹತ್ಯೆ ನಿಷೇಧದ ಬಗ್ಗೆ ಮಾತಾಡಿದರೆ ನಾನು ಕೆಲಸ ಕಳೆದುಕೊಳ್ಳಬೇಕಾಗಬಹುದು ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್...

ಗೋಹತ್ಯೆ ನಿಷೇಧ ಬಗ್ಗೆ ಮಾತಾಡಿದರೆ ಕೆಲಸ ಹೋಗಬಹುದು: ಅರವಿಂದ ಸುಬ್ರಹ್ಮಣ್ಯನ್
ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್
Published On :

ಮುಂಬೈ: ಗೋಹತ್ಯೆ ನಿಷೇಧದ ಬಗ್ಗೆ ಮಾತಾಡಿದರೆ ನಾನು ಕೆಲಸ ಕಳೆದುಕೊಳ್ಳಬೇಕಾಗಬಹುದು ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಹೇಳಿದ್ದಾರೆ.

ಮುಂಬೈ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದದ ವೇಳೆ ಮಾತನಾಡಿದ ಅವರು ಈ ರೀತಿ ಹೇಳಿದರು. ಗೋಹತ್ಯೆ ನಿಷೇಧ ನಮ್ಮ ದೇಶದ ಹಳ್ಳಿಗಳಲ್ಲಿ ವಾಸಿಸುತ್ತಿರುವ ಜನರ ಆದಾಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ವಿದ್ಯಾರ್ಥಿಗಳು ಪ್ರಶ್ನೆ ಕೇಳಿದಾಗ, ಗೋಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ನಾನು ಮಾತನಾಡಿದರೆ ನನ್ನ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದಾಗ ಅಲ್ಲಿದ್ದವರೆಲ್ಲ ನಗೆಗಡಲಲ್ಲಿ ತೇಲಿದರು.

ಸಾಮಾಜಿಕ ಬಿರುಕುಗಳಿಗೆ ನೀವು  ಪ್ರತಿಕ್ರಿಯಿಸುವ ರೀತಿಯೂ ದೇಶದ ಆರ್ಥಿಕ ಅಭಿವೃದ್ಧಿ ಮೇಲೆ ಮಾರಕ ಪರಿಣಾಮ ಉಂಟುಮಾಡುತ್ತದೆ. ಇದಕ್ಕೆ ನಮ್ಮ ದೇಶವೇ ಉದಾಹರಣೆ. ಮೀಸಲಾತಿಯಿಂದ ಯಾರಿಗೆ ಪ್ರಯೋಜನವಾಗಿದೆ, ಯಾರಿಗೆ ಆಗಿಲ್ಲ, ಯಾವ ಧರ್ಮ ಏನು ಮಾಡಿದೆ, ಮಾಡಿಲ್ಲ ಎಂಬಂತಹ ಸಾಮಾನ್ಯ ತತ್ವಗಳು ಅಭಿವೃದ್ಧಿ ಮೇಲೆ ಭಾರೀ ಪ್ರಭಾವ ಬೀರುತ್ತಿವೆ ಎಂದು ಸುಬ್ರಮಣಿಯನ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.