ಜೇಟ್ಲಿ ಮಾನನಷ್ಟ ಪ್ರಕರಣ: ಕೇಜ್ರಿವಾಲ್ ಗೆ ಸಮನ್ಸ್
ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಆಮ್ ಆದ್ಮಿ ಪಕ್ಷದ 6 ಮಂದಿಗೆ...

ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಆಮ್ ಆದ್ಮಿ ಪಕ್ಷದ 6 ಮಂದಿಗೆ ಸ್ಥಳೀಯ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.
ನ್ಯಾಯಾಲಯ ಜಾರಿ ಮಾಡಿರುವ ಸಮನ್ಸ್ ನಲ್ಲಿ ಏ.7ರಂದು ಹಾಜರಾಗುವಂತೆ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ಆಶುತೇಷ್, ಸಂಜಯ್ ಸಿಂಗ್, ರಾಘವ್ ಚಾಧಾ ಹಾಗೂ ದೀಪಕ್ ಬಾಜ್ ಪೇಯಿಗೆ ತಿಳಿಸಿದೆ.
ಡಿಡಿಸಿಎ ಹಗರಣ ಸಂಬಂಧ ತಮ್ಮ ವಿರುದ್ಧ ಆಪ್ ನಾಯಕರು ಸುಳ್ಳು ಆರೋಪ ಮಾಡಿದ್ದಾರೆಂದು ಹೇಳಿದ್ದ ಜೇಟ್ಲಿ ಅವರು 6 ನಾಯಕರನ ವಿರುದ್ಧ ಮಾನನಷ್ಟ ಪ್ರಕರಣವನ್ನು ದಾಖಲು ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


