ದೇಶ

ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕನ್ಹಯ್ಯ ಕುಮಾರ್ ಗೆ ಜೆಎನ್ ಯು ದಂಡ ವಿಧಿಸಿತ್ತು

ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿ....

ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕನ್ಹಯ್ಯ ಕುಮಾರ್ ಗೆ ಜೆಎನ್ ಯು ದಂಡ ವಿಧಿಸಿತ್ತು
ಕನ್ಹಯ್ಯ ಕುಮಾರ್
Published On :
ನವದೆಹಲಿ: ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ವಿದ್ಯಾರ್ಥಿನಿಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೆ ಈ ಸಂಬಂಧ ಜೆಎನ್ ಯು ಕನ್ಹಯ್ಯ ಕುಮಾರ್ ದಂಡ ವಿಧಿಸಿತ್ತು.
2015ರ ಜೂನ್‌ 10ರಂದು ಜೆಎನ್‌ಯು ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕವಾಗಿ ಮೂತ್ರ ವಿಸರ್ಜಿನೆ ಮಾಡುತ್ತಿದ್ದ ಕನ್ಹಯ್ಯಾ ಕುಮಾರ್‌ ಅವರನ್ನು ವಿದ್ಯಾರ್ಥಿನಿಯೊಬ್ಬಳು(ಇದೀಗ ಹಳೆ ವಿದ್ಯಾರ್ಥಿನಿ ) ಆಕ್ಷೇಪಿಸಿದ್ದಾಳೆ. ಈ ವೇಳೆ ಉಢಾಫೆತನ ತೋರಿದ ಕನ್ಹಯ್ಯ ಕುಮಾರ ಮೂತ್ರ ವಿಸರ್ಜನೆ ಮುಂದುವರಿಸಿ, 'ಇದು ನನ್ನ ಹಾಸ್ಟೇಲ್‌ ,ನೀನು ಹುಚ್ಚಿ'  ಎಂದು ನಿಂದಿಸಿ 'ನಿನ್ನನ್ನು ನೋಡಿಕೊಳ್ಳುತ್ತೇನೆ .ನನ್ನ ವಿರುದ್ದ ಅದೇನು ಮಾಡುತ್ತೀಯಾ ಮಾಡು' ಎಂದಿದ್ದರು ಎಂದು ಆರೋಪಿಸಲಾಗಿತ್ತು.
ಈ ಬಗ್ಗೆ ಜೆಎನ್‌ಯು ಆಡಳಿತ ಮಂಡಳಿಗೆ ವಿದ್ಯಾರ್ಥಿನಿ ದೂರನ್ನು ನೀಡಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಳು. ಆದರೆ ಕನ್ಹಯ್ಯಾ ಭವಿಷ್ಯದ ದೃಷ್ಟಿಯಿಂದ ಆಡಳಿತ ಮಂಡಳಿ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕಿ ಕೇವಲ 3,000 ರೂಪಾಯಿ ದಂಡ ವಿಧಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.