ಆಪ್ ಗೆ ಬಿಜೆಪಿ ನಾಯಕನಿಂದ ಬಜೆಟ್ ಪಾಠ!
ಈ ಹಿಂದಿನಿಂದಲೂ ಬಿಜೆಪಿ ವಿರುದ್ಧ ಟೀಕೆಗಳನ್ನು ಮಾಡಿಕೊಂಡು ಬಂದಿರುವ ಆಮ್ ಆದ್ಮಿ ಪಕ್ಷ ಇದೀಗ, ಬಿಜೆಪಿಯ ಹಿರಿಯ ನಾಯಕನಿಂದ ಪಾಠಿ ಹೇಳಿಸಿಕೊಳ್ಳಲು ತಯಾರಿ ನಡೆಸಿದೆ...

ನವದೆಹಲಿ: ಈ ಹಿಂದಿನಿಂದಲೂ ಬಿಜೆಪಿ ವಿರುದ್ಧ ಟೀಕೆಗಳನ್ನು ಮಾಡಿಕೊಂಡು ಬಂದಿರುವ ಆಮ್ ಆದ್ಮಿ ಪಕ್ಷ ಇದೀಗ, ಬಿಜೆಪಿಯ ಹಿರಿಯ ನಾಯಕನಿಂದ ಪಾಠಿ ಹೇಳಿಸಿಕೊಳ್ಳಲು ತಯಾರಿ ನಡೆಸಿದೆ.
ಇನ್ನು ಕೆಲವೇ ದಿನಗಳಲ್ಲಿ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಬಜೆಟ್ ಮಂಡಿಸಲಿದ್ದು, ಅದಕ್ಕೂ ಮುನ್ನ ತನ್ನ ಶಾಸಕರಿಗೆ ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರಿಂದ ಬಜೆಟ್ ಕುರಿತ ತರಬೇತಿ ಕಾರ್ಯಾಗಾರವೊಂದನ್ನು ಆಯೋಜಿಸಿದೆ.
ಯಶವಂತ್ ಸಿನ್ಹಾ ಅವರು ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ, ಆರ್ಥಿಕ ತಜ್ಞರಾಗಿ ಅನುಭವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿನ್ಹಾ ಅವರು ಬಜೆಟ್ ಹೂರಣದ ಕುರಿತು ಶಾಸಕರೊಂದಿಗೆ ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


