ಐಇಡಿ ಸ್ಫೋಟ: 5 ಸಿಆರ್ ಪಿಎಫ್ ಯೋಧರು ಗಾಯ
ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶ ಸುಕ್ಮಾ ಜಿಲ್ಲೆಯಲ್ಲಿ ಐಇಡಿ ಸ್ಫೋಟಗೊಂಡ ಐವರು ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ರಾಯ್ಪುರ: ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶ ಸುಕ್ಮಾ ಜಿಲ್ಲೆಯಲ್ಲಿ ಐಇಡಿ ಸ್ಫೋಟಗೊಂಡ ಐವರು ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಬಂದಾ-ಕೊಂತದ ಅರಣ್ಯ ಪ್ರದೇಶದ ಬಳಿ ಮುರ್ಳಿಗುಡ ಮತ್ತು ಬಂದಾದ ನಡುವೆ ರಸ್ತೆ ಕಾಮಗಾರಿಯೊಂದು ನಡೆಯುತ್ತಿತ್ತು. ಸ್ಥಳದಲ್ಲಿ 217ರ ಗಸ್ತು ಪಡೆ ಭದ್ರತಾ ಕಾರ್ಯದಲ್ಲಿ ತೊಡಗಿಕೊಂಡಿತ್ತು. ಈ ವೇಳೆ ಮಾವೋವಾದಿಗಳಿಟ್ಟಿದ್ದ ಐಇಡಿ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ವೇಳೆ ಎಸ್. ನಿವಾಸ್ ಮತ್ತು ಪ್ರಭಾತ್ ತ್ರಿಪಾಠಿ ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


