ದೇಶ

ಬಿಜೆಪಿಯೇ ಮೈನ್ ಟಾರ್ಗೆಟ್ : ಪ್ರಶಾಂತ್ ಕಿಶೋರ್

2017 ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯೇ ನಮಗೆ ಮೈನ್ ಟಾರ್ಗೆಟ್, ಆಡಳಿತಾರೂಢ ಸಮಾಜವಾದಿ ಪಕ್ಷ ಎರಡನೇಯ ಟಾರ್ಗೆಟ್ ಎಂದು ಕಾಂಗ್ರೆಸ್ ..

ಬಿಜೆಪಿಯೇ ಮೈನ್ ಟಾರ್ಗೆಟ್ : ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್
Published On :

ಲಕ್ನೋ: 2017 ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯೇ ನಮಗೆ ಮೈನ್ ಟಾರ್ಗೆಟ್, ಆಡಳಿತಾರೂಢ ಸಮಾಜವಾದಿ ಪಕ್ಷ ಎರಡನೇಯ ಟಾರ್ಗೆಟ್ ಎಂದು ಕಾಂಗ್ರೆಸ್ ಮುಖಂಡ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ರಾಜಕೀಯ ಆಖಾಡದಲ್ಲಿ ಪ್ರಮುಖವಾಗಿ ಚರ್ಚಿತವಾಗುತ್ತಿರುವ ಹೆಸರು ಪ್ರಶಾಂತ್ ಕಿಶೋರ್, ಅವರದ್ದು.  ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಮಹಾ ಮೈತ್ರಿ ಕೂಟ ಜಯಗಳಿಸಲು ಕಾರಣವಾದ ಮಾಸ್ಟರ್ ಮೈಂಡ್ ಪ್ರಶಾಂತ್ ಕಿಶೋರ್. ಉತ್ತರ ಪ್ರದೇಶ ಮತ್ತು ಗುಜರಾತ್ ವಿಧಾನ ಸಭೆ ಚುನಾವಣೆಯಲ್ಲಿ ಸಹಾಯ ನೀಡುವಂತೆ ಪ್ರಶಾಂತ್ ಕಿಶೋರ್ ಅವರಿಗೆ ಕಾಂಗ್ರೆಸ್ ಮನವಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ಜೊತೆ ಲಕ್ನೋದಲ್ಲಿ ಸುದೀರ್ಘ ಚರ್ಚೆ ನಡೆಸಿದ ಪ್ರಶಾಂತ್ ಕಿಶೋರ್ ಬಿಜೆಪಿಯೇ ನಮಗೆ ಮೈನ್ ಟಾರ್ಗೆಟ್ ಎಂದು ಹೇಳಿದ್ದಾರೆ. ಚುನಾವಣೆಗಾಗಿ ಈಗಾಗಲೇ ರಣತಂತ್ರ ಎಣೆಯುತ್ತಿರುವ ಪ್ರಶಾಂತ್ ಕಿಶೋರ್ ಜಯಗಳಿಸುವ ವಿಶ್ವಾಸವಿದ್ದವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.