ಹೊರ ರಾಜ್ಯದ ಸ್ವಂತ ವಾಹನಕ್ಕೆ ಹೇರಲಾಗುತ್ತಿದ್ದ ಜೀವಿತಾವಧಿ ತೆರಿಗೆ ರದ್ದು
ಹೊರ ರಾಜ್ಯದ ವಾಹನಗಳಿಗೆ ಕರ್ನಾಟಕ ಸರ್ಕಾರ ರೂಪಿಸಿದ್ದ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ(ತಿದ್ದುಪಡಿ)...

Published On :
ಬೆಂಗಳೂರು: ಹೊರ ರಾಜ್ಯದ ವಾಹನಗಳಿಗೆ ಕರ್ನಾಟಕ ಸರ್ಕಾರ ರೂಪಿಸಿದ್ದ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ(ತಿದ್ದುಪಡಿ)-2014' ಅಂಸವಿಧಾನಿಕ ಎಂದು ಹೈಕೋರ್ಟ್ ಹೇಳಿದೆ.
ರಾಜ್ಯದಲ್ಲಿ 30 ದಿನಕ್ಕೂ ಹೆಚ್ಚು ಕಾಲ ಉಳಿದಿರುವ ಹೊರ ರಾಜ್ಯದ ಬೈಕ್, ಕಾರು ಇಂತಹ ಸ್ವಂತ ಬಳಕೆಯ ವಾಹನಗಳ ಮೇಲೆ ಜೀವಮಾನ ತೆರೆಗೆ ಪಾವತಿಸಬೇಕು ಎಂದು ಕರ್ನಾಟಕ ಸರ್ಕಾರ ಈ ಕಾಯ್ದೆ ರೂಪಿಸಿತ್ತು.
ಆದರೆ, ಹೈಕೋರ್ಟ್ ಈ ಕಾಯ್ದೆಯನ್ನು ಅಸಂವಿಧಾನಿಕ ಎಂದು ಹೇಳಿದ್ದು, ಈ ಮೂಲಕ ಹೊರ ರಾಜ್ಯದ ವಾಹನಗಳು ಕರ್ನಾಟಕದಲ್ಲಿ ಮುಕ್ತವಾಗಿ ಸಂಚರಿಸಲು ಇದ್ದ ಅಡ್ಡಿ ನಿವಾರಣೆಯಾಗಿದೆ.
ಸಾರಿಗೆ ಇಲಾಖೆ ರಾಜ್ಯದಲ್ಲಿ 30 ದಿನಗಳಿಗಿಂತ ಹೆಚ್ಚು ಕಾಲ ಸಂಚರಿಸುತ್ತಿದ್ದ ವಾಹನಗಳ ಮಾಲೀಕರಿಗೆ ಜೀವಮಾನ ತೆರಿಗೆ ಪಾವತಿಸುವಂತೆ ಡಿಮ್ಯಾಂಡ್ ನೋಟಿಸ್ ನೀಡಿತ್ತು.
ಇದನ್ನು ಪ್ರಶ್ನಿಸಿ ಕೇರಳದ ಉದ್ಯೋಗಿ ಅನಂತು ಕರಟ್ಟುಪಾರಂಬಿಲ್ ಮತ್ತು ಇತರರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


