ಇನ್ನು ಮುಂದೆ ಬಡವರಿಗೆ ಸಿಗಲಿದೆ ಉಚಿತ ಎಲ್ ಪಿಜಿ ಸಂಪರ್ಕ
ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾಡಿದ್ದ ಘೋಷಣೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದೀಗ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು, ಗ್ರಾಮೀಣ ಪ್ರದೇಶದ ಬಡವರಿಗೆ ಉಚಿತವಾಗಿ...

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾಡಿದ್ದ ಘೋಷಣೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದೀಗ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು, ಗ್ರಾಮೀಣ ಪ್ರದೇಶದ ಬಡವರಿಗೆ ಉಚಿತವಾಗಿ ಎಲ್ ಪಿಜಿ ನೀಡಲು ಮುಂದಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಎಲ್ ಪಿಜಿ ನೀಡುವ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಗುರುವಾರ ಅಸ್ತು ಎಂದಿದ್ದು, ಯೋಜನೆಗೆ ರು. 8 ಸಾವಿರ ಕೋಟಿ ಹಣವನ್ನು ಬಿಡುಗಡೆಗೊಳಿಸಲು ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಉಚಿತ ಎಲ್ ಪಿಜಿ ಯೋಜನೆ ಮಹಿಳೆಯರ ಹೆಸರಿನಲ್ಲಿ ದೊರೆಯಲಿದ್ದು, ಗ್ರಾಮೀಣ ಪ್ರದೇಶದಲ್ಲಿನ ಬಿಪಿಎಲ್ ಕುಟುಂಬಗಳಿಗೆ ಯೋಜನೆಯ ಫಲ ಸಿಗಲಿದೆ. ಪ್ರಸ್ತುತ ಜಾರಿಯಾಗಲಿರುವ ಯೋಜನೆಯಡಿಯಲ್ಲಿ 2016-17ನೇ ಸಾನಿಲ್ಲಿ ಒಂದೂರೆ ಕೋಟಿ ಜನರಿಗೆ ಎಲ್ ಪಿಜಿ ಸಂಪರ್ಕ ದೊರಯಲಿದೆ. ಮುಂದಿನ 2 ವರ್ಷಗಳಲ್ಲಿ 5 ಕೋಟಿ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಎಲ್ ಪಿಜಿ ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಲಾಗುತ್ತಿದೆ.
ಯೋಜನೆ ಕುರಿತಂತೆ ಮಾತನಾಡಿರುವ ತೈಲ ಸಚಿವ ಧರ್ಮೇಂದ್ರ ಅವರು, ಗ್ರಾಮೀಣ ಪ್ರದೇಶದ ಬಡಜನತೆಗಾಗಿ ಉಚಿತ ಎಲ್ ಪಿಜಿ ಸಂಪರ್ಕ ಕಲ್ಪಿಸಲು ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಚಿವ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


