ದೇಶ

ಮೀಸಲಾತಿ ಪ್ರತಿಭಟನೆಯಲ್ಲಿ ಮೃತಪಟ್ಟವರಿಗೆ ಹುತಾತ್ಮ ಗೌರವ ನೀಡಿ: ಜಾಟ್ ಸಮುದಾಯ

ಹರ್ಯಾಣದಲ್ಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಜಾಟ್ ಸಮುದಾಯದವರು ಸಾವನ್ನಪ್ಪಿದ ಪ್ರತಿಭಟನಾಕಾರರಿಗೆ ಹುತಾತ್ಮರ ಗೌರವ ನೀಡಬೇಕೆಂಬ ಹೊಸ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಮೀಸಲಾತಿ ಪ್ರತಿಭಟನೆಯಲ್ಲಿ ಮೃತಪಟ್ಟವರಿಗೆ ಹುತಾತ್ಮ ಗೌರವ ನೀಡಿ: ಜಾಟ್ ಸಮುದಾಯ
ಜಾಟ್ ಪ್ರತಿಭಟನೆ (ಸಂಗ್ರಹ ಚಿತ್ರ)
Published On :
ಚಂಡೀಗಢ: ಹರ್ಯಾಣದಲ್ಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಜಾಟ್ ಸಮುದಾಯದವರು ಸಾವನ್ನಪ್ಪಿದ ಪ್ರತಿಭಟನಾಕಾರರಿಗೆ ಹುತಾತ್ಮರ ಗೌರವ ನೀಡಬೇಕೆಂಬ ಹೊಸ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.  
ಇಂಡಿಯಾ ಟುಡೆ ವರದಿ ಪ್ರಕಾರ, ಮೃತಪಟ್ಟ ಪ್ರತಿಭಟನಾ ನಿರತರನ್ನು ಹುತಾತ್ಮರೆಂದು ಘೋಷಿಸಬೇಕು ಒಂದು ವೇಳೆ ಬೇಡಿಕೆ ಇಡೇರದೇ ಇದ್ದರೆ, ಮತ್ತೆ ಪ್ರತಿಭಟನೆ ನಡೆಸುವುದಾಗಿ ಜಾಟ್ ಸಮುದಾಯ ಎಚ್ಚರಿಕೆ ನೀಡಿದೆ.  ಪ್ರತಿಭಟನಾಕಾರರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂಬ  ಮತ್ತೊಂದು ಬೇಡಿಕೆಯನ್ನು ಜಾಟ್ ಸಮುದಾಯ ಮುಂದಿಟ್ಟಿದೆ. 
ಜಾಟ್ ಸಮುದಾಯದ ಬೇಡಿಕೆಗಳಿಗೆ ನಕಾರಾತ್ಮಕವಾಗಿ ಸ್ಪಂದಿಸುವ ಸೂಚನೆ ನೀಡಿರುವ ಹರ್ಯಾಣ ಸರ್ಕಾರ, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಿರುವುದಾಗಿ ತಿಳಿಸಿದೆ. ಇದೇ ವೇಳೆ ಜಾಟ್ ಸಮುದಾಯಕ್ಕೆ ಮೀಸಲಾತಿ ನೀಡುವ ಕಾಯ್ದೆಯ ಕರಡನ್ನು ರಚಿಸುವುದಕ್ಕೆ ಸಂಬಂಧಿಸಿದಂತೆ ಹರ್ಯಾಣ ಸರ್ಕಾರ ಮಾ.12 ರಂದು ಸರ್ವಪಕ್ಷ ಸಭೆ ಕರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.