ದೇಶ

ಇಂಡಿಯಾ ಬದಲು ಭಾರತ: ಪಿಐಎಲ್ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಇಂಡಿಯಾ ಬದಲು ಭಾರತ ಎಂದು ಹೆಸರಿಡಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್...

ಇಂಡಿಯಾ ಬದಲು ಭಾರತ: ಪಿಐಎಲ್ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಇಂಡಿಯಾ ಬದಲು ಭಾರತ ಎಂದು ಹೆಸರಿಡಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಯಾರಿಗೆ ಇಂಡಿಯಾ ಎಂದು ಕರೆಯಬೇಕೆಂದಿದೆಯೋ ಅವರು ಇಂಡಿಯಾ ಎಂದು ಕರೆಯಲಿ, ಯಾರು ಭಾರತ ಎಂದು ಇಷ್ಟ ಪಡುತ್ತಾರೋ ಅವರು ಭಾರತ ಎಂದು ಕರೆಯಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಇಂಡಿಯಾ ಬದಲು ಭಾರತ ಎಂದು ಕರೆಯುವಂತೆ ನಿರ್ದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಮೂರ್ತಿ ಟಿಎಸ್ ಠಾಕೂರ್, ಸಾರ್ಜಜನಿಕ ಹೀತಾಸಕ್ತಿ ಹೆಸರಲ್ಲಿ ಈ ರೀತಿಯ ಭಾವನಾತ್ಮಕ ವಿಷಯಗಳನ್ನು ಕೋರ್ಟ್ ಮೆಟ್ಟಿಲಿಗೆ ತರಬೇಡಿ. ಅವರವರ ಇಷ್ಟಕ್ಕೆ ತಕ್ಕಂತೆ ದೇಶದ ಹೆಸರನ್ನು ಕರೆಯಬಹುದು ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.