ದೇಶ

ಪ.ಬಂಗಾಳ ಚುನಾವಣೆ: ಸೀಟು ಹಂಚಿಕೆ ಬಿಕ್ಕಟ್ಟು ಪರಿಹರಿಸಿಕೊಳ್ಳುವ ವಿಶ್ವಾಸದಲ್ಲಿ ಕಾಂಗ್ರೆಸ್- ಸಿಪಿಐ ನಾಯಕರು

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್- ಸಿಪಿಐ(ಎಂ) ಪಕ್ಷಗಳು ಈಗ ಸೀಟು ಹಂಚಿಕೆ ವಿಷಯದ ಬಗ್ಗೆ ಗಮನ ಹರಿಸುತ್ತಿವೆ.

ಪ.ಬಂಗಾಳ ಚುನಾವಣೆ: ಸೀಟು ಹಂಚಿಕೆ ಬಿಕ್ಕಟ್ಟು ಪರಿಹರಿಸಿಕೊಳ್ಳುವ ವಿಶ್ವಾಸದಲ್ಲಿ ಕಾಂಗ್ರೆಸ್- ಸಿಪಿಐ ನಾಯಕರು
ಸಿಪಿಐ- ಕಾಂಗ್ರೆಸ್
Published On :

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್- ಸಿಪಿಐ(ಎಂ) ಪಕ್ಷಗಳು ಈಗ ಸೀಟು ಹಂಚಿಕೆ ವಿಷಯದ ಬಗ್ಗೆ ಗಮನ ಹರಿಸುತ್ತಿವೆ.
ಇನ್ನು ಕೆವಲೇ ದಿನಗಳಲ್ಲಿ ಸೀಟು ಹಂಚಿಕೆ ವಿಷಯವನ್ನು ಇತ್ಯರ್ಥಗೊಳಿಸಲಾಗುವುದು ಎಂದು  ಕಾಂಗ್ರೆಸ್ ಎಡ ಪಕ್ಷಗಳ ನಾಯಕರು ಹೇಳಿದ್ದಾರೆ. ಎಡಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸಿರುವ 84 ವಿಧಾನಸಭಾ ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಸೀಟು ಹಂಚಿಕೆ ವಿಷಯ ಜಟಿಲಗೊಂಡಿದೆ.
ಎಡಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಕಾಂಗ್ರೆಸ್ ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದು ದುರದೃಷ್ಟಕರ ಸಂಗತಿ. ಆದರೆ ಸೀಟಿ ಹಂಚಿಕೆ ಬಗ್ಗೆ ಸರಿಯಾದ ಚಿತ್ರಣ ಸಿಗಬೇಕೆಂದರೆ ಇನ್ನೂ ಕೆಲವುದಿನ ಕಾಯಬೇಕಾಗುತ್ತದೆ ಎಂದು ಸಿಪಿಐ(ಎಂ) ನ ನಾಯಕ ಮೊಹಮ್ಮದ್ ಸಲೀಮ್ ಹೇಳಿದ್ದಾರೆ.
ಹೆಸರು ಹೇಳಲು ಇಚ್ಛಿಸದ ಎಡಪಕ್ಷಗಳ ಮುಖಂಡರು ಸಹ ಸೀಟು ಹಂಚಿಕೆ ಕುರಿತು ಮಾತನಾಡಿದ್ದು, ಕೆಲವೇ ದಿನಗಳಲ್ಲಿ ಸೀಟು ಹಂಚಿಕೆ ವಿಷಯ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಎಡಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಸಿಪಿಐ(ಎಂ) 116  ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಕಾಂಗ್ರೆಸ್ 75 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.