ದೇಶ

ಪ.ಬ ವಿಧಾನಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಮಮತಾ

ಪಶ್ಚಿಮ ಬಂಗಾಳದಲ್ಲಿ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ನಿಮಿತ್ತ ನಿನ್ನೆ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಮುಖ್ಯಮಂತ್ರಿ...

ಪ.ಬ ವಿಧಾನಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಮಮತಾ
ವಿಧಾನಸಭಾ ಚುನಾವಣೆ ನಿಮಿತ್ತ ಮಮತಾ ಬ್ಯಾನರ್ಜಿ ಸೇರಿದಂತೆ ಇನ್ನಿತರೆ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರು ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿರುವುದು.
Published On :

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ನಿಮಿತ್ತ ನಿನ್ನೆ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬಿಡುಗಡೆ ಮಾಡಿದ್ದಾರೆ,

ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ ಅವರು, 2011ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷ ನೀಡಿದ್ದ ಭರವಸೆಗಳ ಪೈಕಿ ಈಗಾಗಲೇ ಶೇ.80 ರಷ್ಟನ್ನು ಈಡೇರಿಸಿದೆ. ಇನ್ನು ಉಳಿದ ಭರವಸೆಗಳನ್ನು ಈ ತಿಂಗಳ ಅಂತ್ಯದಲ್ಲಿ ಈಡೇರಿಸಲಾಗುವುದು. ಪ್ರಸ್ತುತ ಬಿಡುಗಡೆ ಮಾಡಲಾಗಿರುವ ಪ್ರಣಾಳಿಕೆಯಲ್ಲಿ ಹೊಸ ಯೋಜನೆ ಹಾಗೂ ಕಾರ್ಯಕ್ರಮಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ ಆರ್ಥಿಕ ಸಮಸ್ಯೆಯಿದ್ದರೂ ಕೂಡ ಬಂಗಾಳವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ ಎಂದು ಹೇಳಿದ್ದಾರೆ.

ನಾವು ಭರವಸೆ ನೀಡುವುದು ಕಡಿಮೆ. ಆದರೆ, ಹೆಚ್ಚು ಕೆಲಸವನ್ನು ಮಾಡುತ್ತೇವೆ. ನಾವು ಎಂದಿಗೂ ಮತಗಳ ಸಂಖ್ಯೆ ಹೆಚ್ಚಿಸಿಕೊಳ್ಳುವ ಸಲುವಾಗಿ ಕೀಳು ಮಟ್ಟದ ರಾಜಕೀಯವನ್ನು ಮಾಡುವುದಿಲ್ಲ. ಇದೀಗ ರಾಜ್ಯದಲ್ಲಿ ಹಳ್ಳಿಯಲ್ಲಿರುವವರು, ನಗರದಲ್ಲಿರುವ ಜನತೆ ಹಾಗೂ ಅಲ್ಪಸಂಖ್ಯಾತರೆಲ್ಲರೂ ಸಮಾನತೆಯಿಂದ ಜೀವನ ನಡೆಸುತ್ತಿದ್ದಾರೆ. ನೀಡಿದ ಭರವಸೆಗಿಂತಲೂ ಸಾವಿರಪಟ್ಟು ಹೆಚ್ಚು ಕೆಲಸವನ್ನು ಮಾಡಿದ್ದೇವೆ. ಯುವಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಹೆಣ್ಣು ಮಕ್ಕಳಿಗೆ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.

ನಮ್ಮ ಈವರೆಗಿನ ಗೆಲುವಿನ ಹೆಜ್ಜೆಯನ್ನು ನಮ್ಮ ತಾಯಿ, ಮಣ್ಣು ಹಾಗೂ ಜನಸಾಮಾನ್ಯರಿಗೆ ನೀಡಲು ಬಯಸುತ್ತೇನೆ. ಕಳೆದ ನಾಲ್ಕು ವರ್ಷದಿಂದ ಕೆಲವು ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ವ್ಯಕ್ತಿಗಳು ತಪ್ಪು ಪ್ರಚಾರಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಆರ್ಥಿಕ ವಲಯದಲ್ಲಿ ನಾವು ಸಾಕಷ್ಟು ಗೆಲವು ಸಾಧಿಸಿದ್ದೇವೆ. ಹಲವು ಯೋಜನೆಗಳನ್ನು ಉಚಿತವಾಗಿ ಜಾರಿಗೆ ತಂದಿದ್ದೇವೆ. ಇದೇ ರೀತಿಯ ಯೋಜನೆಗಳನ್ನು ಮುಂದಿನ ವರ್ಷಗಳಲ್ಲೂ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.