ಕೇರಳ ವಿಧಾನಸಭೆ ಚುನಾವಣೆಗೆ 70 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಟಿಎಂಸಿ
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತೃಣಮೂಲ ಕಾಂಗ್ರೆಸ್ ಶನಿವಾರ 70 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.

Published On :
ಕೊಚ್ಚಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತೃಣಮೂಲ ಕಾಂಗ್ರೆಸ್ ಶನಿವಾರ 70 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಕೇರಳ ಟಿಎಂಸಿ ಅಧ್ಯಕ್ಷ ಮನೋಜ್ ಶಂಕರ ನೆಲ್ಲೂರ್ ಅವರು, ಮುಂಬರುವ ವಿಧಾಸಭೆ ಚುನಾವಣೆಯಲ್ಲಿ ಪಕ್ಷ ಎಲ್ಲಾ 140 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದರು.
ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಒಪ್ಪಿಗೆ ಪಡೆದ ನಂತರ ಶೀಘ್ರದಲ್ಲೇ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ನೆಲ್ಲೂರ್ ಅವರು ತಿಳಿಸಿದರು. ಅಲ್ಲದೆ ಮಮತಾ ಬ್ಯಾನರ್ಜಿ ಅವರು ತಿರುವನಂತಪುರ, ಕೊಚ್ಚಿ ಹಾಗೂ ಕೊಜಿಕೊಡ್ ನಲ್ಲಿ ನಡೆಯುವ ಮೂರು ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


