ಬಿಹಾರದಲ್ಲಿ ದೋಣಿ ದುರಂತ: 5 ಮಕ್ಕಳ ಜಲಸಮಾಧಿ
ಬಿಹಾರದ ಬೆಗುಸರೈ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಐವರು ಮಕ್ಕಳು ಜಲಸಮಾಧಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ...

ಬೆಗುಸರೈ: ಬಿಹಾರದ ಬೆಗುಸರೈ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಐವರು ಮಕ್ಕಳು ಜಲಸಮಾಧಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಒಟ್ಟು 13 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಕುಮಾರ್ ಸಂಘ್ ಗ್ರಾಮದ ಬಳಿಯ ಸಿಗ್ರೈಲಾ ತೊರೆಯಲ್ಲಿ ಮುಳುಗಿದ್ದು, ಮೂವರು ಬಾಲಕು ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿಗಳು ಕೂಡಲೇ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಐದು ಮೃತ ದೇಹಗಳು ದೊರೆತಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ದೋಣಿಯಲ್ಲಿ ತೆರಳುತ್ತಿದ್ದವರೆಲ್ಲರೂ ಕುಮಾರ್ ಸಂಘ್ ಗ್ರಾಮದವರೆಂದು ತಿಳಿದುಬಂದಿದ್ದು, ಮೃತರನ್ನು ರೂಪಮ್ ಕುಮಾರಿ (8 ವರ್ಷ), ಅಭಿಷೇಕ್ ಕುಮಾರ್ (10 ವರ್ಷ), ಜಿತ್ನಿ ಕುಮಾರಿ (12 ವರ್ಷ), ಛೊಟ್ಕಿಕುಮಾರಿ (8 ವರ್ಷ) ಮತ್ತು ಸಚಿನ್ (10 ವರ್ಷ) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ ಸಾವು-ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ರಕ್ಷಣಾ ತಂಡದ ಅಧಿಕಾರಿಗಳು ಹೇಳುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


