ದೇಶ

ಭಾರತದ ಅಸ್ಸಾಂ, ಗುವಾಹತಿ ಮತ್ತು ನೇಪಾಳದಲ್ಲಿ ಭೂಕಂಪನ

ನೆರೆಯ ನೇಪಾಳ ಸೇರಿದಂತೆ ಭಾರತದ ಹಲವೆಡೆ ಭಾನುವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರಿಂದ 4.8ರಷ್ಟು ತೀವ್ರತೆ ದಾಖಲಾಗಿದೆ...

ಭಾರತದ ಅಸ್ಸಾಂ, ಗುವಾಹತಿ ಮತ್ತು ನೇಪಾಳದಲ್ಲಿ ಭೂಕಂಪನ
ಭೂಕಂಪನ (ಸಂಗ್ರಹ ಚಿತ್ರ)
Published On :

ನವದೆಹಲಿ: ನೆರೆಯ ನೇಪಾಳ ಸೇರಿದಂತೆ ಭಾರತದ ಹಲವೆಡೆ ಭಾನುವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರಿಂದ 4.8ರಷ್ಟು ತೀವ್ರತೆ ದಾಖಲಾಗಿದೆ.

ಭಾನುವಾರ ಮಧ್ಯಾಹ್ನ ಸುಮಾರು 4 ಗಂಟೆಯಲ್ಲಿ ಭೂಕಂಪನ ಸಂಭವಿಸಿದ್ದು, ಅಸ್ಸಾಂ ಮತ್ತು ಗುವಾಹತಿಯ ನಾಗಾಂವ್ ಪ್ರದೇಶದಲ್ಲಿ ಕಂಪನದ ಅನುಭವ ಉಂಟಾಗಿದೆ. ಒಂದು ಕ್ಷಣ  ಕಂಗಾಲಾದ ಜನರು ಕೆಲ ಗಂಟೆಗಳ ಕಾಲ ಮನೆಯಿಂದಾಚೆಯೇ ಉಳಿದರು. ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವಂತೆ ಭೂಕಂಪನದ ತೀವ್ರತೆ 4.3ರಷ್ಟಿತ್ತು. ಭೂಕಂಪನ ಭಾರಿ  ತೀವ್ರತೆಯಿಂದೇನು ಕೂಡಿರಲಿಲ್ಲ ಎಂದು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ ಲಘು ಭೂಕಂಪನದಲ್ಲಿ ಯಾವುದೇ ರೀತಿಯ ಹಾನಿ ಆಗಿರುವ ಬಗ್ಗೆ ವರದಿಯಾಗಿಲ್ಲ  ಎಂದು ಜಿಲ್ಲಾಡಳಿತ ತಿಳಿಸಿದೆ.

ನೇಪಾಳದಲ್ಲೂ ನಡುಗಿದ ಭೂಮಿ
ಇನ್ನು ನೇಪಾಳ ರಾಜಧಾನಿ ಕಠ್ಮಂಡುವಿನಲ್ಲೂ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 4.8ರ ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.