ಡಿ.ಕೆ.ರವಿ ಪುಣ್ಯತಿಥಿಗೆ ಅವರ ತಾಯಿ ಒಡವೆ ಅಡವಿಟ್ಟಿರುವುದು ದುರ್ದೈವ: ಜಗದೀಶ್ ಶೆಟ್ಟರ್
ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪುಣ್ಯತಿಥಿ ಮಾಡಲು ಅವರ ತಾಯಿ ಒಡವೆ ಅಡವಿಟ್ಟಿರುವುದು ನಿಜಕ್ಕೂ ದುರ್ದೈವದ ಸಂಗತಿ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಭಾನುವಾರ ಹೇಳಿದ್ದಾರೆ...

ಹುಬ್ಬಳ್ಳಿ: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪುಣ್ಯತಿಥಿ ಮಾಡಲು ಅವರ ತಾಯಿ ಒಡವೆ ಅಡವಿಟ್ಟಿರುವುದು ನಿಜಕ್ಕೂ ದುರ್ದೈವದ ಸಂಗತಿ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಭಾನುವಾರ ಹೇಳಿದ್ದಾರೆ.
ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಡಿ.ಕೆ. ರವಿ ಅವರು ಸಾವನ್ನಪ್ಪಿ 1 ವರ್ಷವಾಗಿದೆ. ಆದರೆ, ಸರ್ಕಾರ ಈ ವರೆಗೂ ತಾನು ಘೋಷಣೆ ಮಾಡಿದ್ದ ಪರಿಹಾರವನ್ನು ಅವರ ಕುಟುಂಬಕ್ಕೆನೀಡಿಲ್ಲ. ಈ ಪರಿಸ್ಥಿತಿಯನ್ನು ಕಂಡರೆ ರಾಜ್ಯ ಸರ್ಕಾರ ನಿದ್ರಾವಸ್ಥೆಯಲ್ಲಿರುವುದು ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಹೀಗಾಗಿ ಘೋಷಣೆ ಮಾಡಿದ ಪರಿಹಾರ ಹಾಗೂ ಇನ್ನಿತರೆ ಕೆಲಸಗಳನ್ನು ಮಾಡಲು ಅಧಿಕಾರಿಯನ್ನು ನೇಮಕ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಓರ್ವ ಐಎಎಸ್ ಅಧಿಕಾರಿ ಕುಟುಂಬಕ್ಕೆ ಈ ರೀತಿಯ ಪರಿಸ್ಥಿತಿ ಎದುರಾಗಿರುವುದು ನಿಜಕ್ಕೂ ದುರ್ದೈವದ ಸಂಗತಿ. ಕೂಡಲೇ ಸರ್ಕಾರ ರವಿ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕಿದೆ ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


