ಆರ್ ಟಿಐ ಅಡಿಯಲ್ಲಿ ಸಚಿವರು ಉತ್ತರಿಸಬೇಕು: ಸಿಐಸಿ ಫರ್ಮಾನು
ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯಗಳ ಸಂಪುಟದ ಸಚಿವರು ಜನರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಕೇಂದ್ರೀಯ ಮಾಹಿತಿ ...

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯಗಳ ಸಂಪುಟದ ಸಚಿವರು ಜನರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಕೇಂದ್ರೀಯ ಮಾಹಿತಿ ಆಯೋಗ(ಸಿಐಸಿ) ಅಧಿಸೂಚನೆ ಹೊರಡಿಸಿದೆ.
ಸಿಐಸಿಯ ಈ ನಿರ್ದೇಶನದಿಂದಾಗಿ ಇನ್ಮುಂದೆ ಜನರು ಆರ್‌ಟಿಐ ಕಾಯ್ದೆ ಬಳಸಿಕೊಂಡು ಯಾವುದೇ ಸಚಿವರಿಗೆ ನೇರವಾಗಿ ಪ್ರಶ್ನೆಗಳನ್ನು ಕೇಳುಹಿಸಬಹುದು. ಆ ಪ್ರಶ್ನೆಗಳಿಗೆ ಸಚಿವರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಉತ್ತರಿಸಬೇಕಾಗುತ್ತದೆ.
ಈ ಸಂಬಂಧ ಕೆಲ ಅಧಿಕಾರಿಗಳನ್ನು ಗೊತ್ತುಪಡಿಸಲು ಇಲ್ಲವೇ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಪ್ರಥಮ ಅಪೀಲು ಅಧಿಕಾರಿಗಳನ್ನು ನೇಮಿಸಿಕೊಳ್ಳವುದು ಸೇರಿದಂತೆ ಪ್ರತಿ ಸಚಿವರಿಗೆ ಕೇಂದ್ರ ಹಾಗೂ ರಾಜ್ಯಗಳು ಅಗತ್ಯ ಬೆಂಬಲ ನೀಡಬೇಕು ಎಂದು ಆಯೋಗವು ಬಲವಾಗಿ ಶಿಫಾರಸು ಮಾಡುತ್ತದೆ ಎಂದು ಮಾಹಿತಿ ಆಯುಕ್ತ ಶ್ರೀಧರ್ ಆಚಾರ್ಯಲು ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಸಚಿವ ಏಕವ್ಯಕ್ತಿ ಕಚೇರಿಯಾಗಿದ್ದು, ಆರ್‌ಟಿಐ ಕಾಯ್ದೆ ಅಡಿಯ ಅರ್ಜಿಗಳಿಗೆ ಸ್ಪಂದಿಸಲು ಅಗತ್ಯ ಮೂಲಸೌಕರ್ಯಗಳಿಲ್ಲ. ಆದ್ದರಿಂದ ಸಾರ್ವಜನಿಕ ಅಧಿಕಾರಿ ಎನ್ನಲಾಗದು ಎಂದು ಹೇಳುವ ಮೂಲಕ ಸಚಿವರು ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ವಿಸ್ತೃತ ಆದೇಶದಲ್ಲಿ ಸಿಐಸಿ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


