ಜೆಎನ್‌ಯು ವಿವಾದ: ತನಿಖೆಯಿಂದ 21 ವಿದ್ಯಾರ್ಥಿಗಳ ತಪ್ಪು ಸಾಬೀತು
ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಜವಾಹರ್ ಲಾಲ್ ನೆಹರು(ಜೆಎನ್‌ಯು) ವಿಶ್ವವಿದ್ಯಾಲಯದಲ್ಲಿನ ದೇಶದ್ರೋಹ ಕಾರ್ಯಕ್ರಮದಲ್ಲಿ ವಿವಿಯ 21 ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆಂದು...

ನವದೆಹಲಿ: ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಜವಾಹರ್ ಲಾಲ್ ನೆಹರು(ಜೆಎನ್‌ಯು) ವಿಶ್ವವಿದ್ಯಾಲಯದಲ್ಲಿನ ದೇಶದ್ರೋಹ ಕಾರ್ಯಕ್ರಮದಲ್ಲಿ ವಿವಿಯ 21 ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆಂದು ವಿವಿಯ ತನಿಖಾ ಸಮಿತಿ ವರದಿ ನೀಡಿದೆ.
ಪ್ರಕರಣ ಕುರಿತಂತೆ ತನಿಖೆ ನಡೆಸಲು ವಿಶ್ವವಿದ್ಯಾಲಯವು ಉನ್ನತ ಮಟ್ಟದ ಆಂತರಿಕ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ತನ್ನ ತನಿಖೆಯ ವರದಿಯನ್ನು ವಿವಿಯ ಉಪಕುಲಪತಿ ಎಂ.ಜಗದೀಶ್ ಕುಮಾರ್ ಅವರಿಗೆ ಸಲ್ಲಿಸಿದೆ.
ವಿಶ್ವವಿದ್ಯಾಲಯದ ನಿಯಮಗಳಿಗೆ ವಿರುದ್ಧವಾಗಿ ನವೆಂಬರ್ 9ರಂದು ಅಫ್ಜಲ್ ಗುರು ಪರವಾಗಿ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿದ್ದು ನಿಜ ಎಂದು ತನಿಖಾ ಸಮಿತಿ ಒಮ್ಮತವಾಗಿ ಅಭಿಪ್ರಾಯಪಟ್ಟಿದೆ.
ಉಮರ್ ಖಾಲಿದ್, ಅನಿರ್ಬನ್ ಭಟ್ಟಾಚಾರ್ಯ, ಅಶುತೋಷ್, ರಾಮನಾಗ ಮೊದಲಾದ ವಿದ್ಯಾರ್ಥಿಗಳಿಗೆ ವಿವಿ ಶೋಕಾಸ್ ನೋಟೀಸ್ ಜಾರಿ ಮಾಡುವ ನಿರೀಕ್ಷೆ ಇದೆ.
ಇದೇ ವೇಳೆ, ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ ಅವರು ಈ ಸಮಿತಿಯ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ದಲಿತ ಸದಸ್ಯರಿಲ್ಲದ ಈ ತನಿಖಾ ಸಮಿತಿಯ ವರದಿಯನ್ನು ತಾವೆಲ್ಲರೂ ಒಪ್ಪಿಕೊಳ್ಳುವುದಿಲ್ಲ ಎಂದು ಕನ್ಹಯ್ಯ ಕೆಲ ದಿನಗಳ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


