'ಭಾರತ್ ಮಾತಾ ಕಿ ಜೈ' ಹೇಳಲಿಲ್ಲ ಎಂದರೆ ಪಾಕಿಸ್ತಾನಕ್ಕೆ ಹೋಗಿ: ಓವೈಸಿಗೆ ಶಿವಸೇನೆ
ಎಐಎಂಐಎಂ ನಾಯಕ ಅಸಾಸುದ್ದೀನ್ ಓವೈಸಿಯವರಿಗೆ ಭಾರತ್ ಮಾತಾ ಕಿ ಜೈ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳುವುದಾದರೆ, ಅವರು ಪಾಕಿಸ್ತಾನಕ್ಕೆ ಹೋಗಲಿ...

ನವದೆಹಲಿ: ಎಐಎಂಐಎಂ ನಾಯಕ ಅಸಾಸುದ್ದೀನ್ ಓವೈಸಿಯವರಿಗೆ ಭಾರತ್ ಮಾತಾ ಕಿ ಜೈ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳುವುದಾದರೆ, ಅವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಶಿವಸೇನೆ ಮಂಗಳವಾರ ಹೇಳಿಕೊಂಡಿದೆ.
ಓವೈಸಿಯವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ರಾಮ್ ದಾಸ್ ಕದಮ್ ಅವರು, ಓವೈಸಿಯವರಿಗೆ ಭಾರತ್ ಮಾತಾಕಿ ಜೈ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳುವುದಾದರೆ, ಅವರು ಪಾಕಿಸ್ತಾನಕ್ಕೆ ಹೋಗಲಿ. ಓವೈಸಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರವನ್ನು ಕೇಳಲಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ.
ನಾನು ಈ ದೇಶದ ಸಂವಿಧಾನವನ್ನು ಪಾಲಿಸುತ್ತೇನೆ. ಆದರೆ, ಘೋಷಣೆ ಕೂಗುವಂತೆ ಯಾರಿಗೂ ಒತ್ತಾಯ ಮಾಡುವುದಿಲ್ಲ. ಆರ್ ಎಸಎಸ್ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರಲು ಯತ್ನಿಸುತ್ತಿದೆ. ಈ ವಿಚಾರವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ನಾನಂತೂ ಘೋಷಣೆ ಕೂಗುವುದಿಲ್ಲ ಈಗ ಏನು ಮಾಡುತ್ತೀರಿ ಭಾಗವತ್ ಸಾಬ್ ಎಂದು ಓವೈಸಿ ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


