ಮಹಾರಾಷ್ಟ್ರ ಸದನ ಹಗರಣ: ಛಗನ್ ಭುಜಬಲ್ 2 ದಿನ ಇಡಿ ವಶಕ್ಕೆ
ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ...

Published On :
ಮುಂಬೈ: ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ ಛಗನ್ ಭುಜಬಲ್ ಅವರನ್ನು ಎರಡು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ಒಪ್ಪಿಸಲಾಗಿದೆ.
ಹಣ ದುರ್ಬಳಕೆ ಆರೋಪದ ಮೇಲೆ ಭುಜಬಲ್ ಅವರನ್ನು ನಿನ್ನೆ ರಾತ್ರಿ ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದರು. ಸುಮಾರು 10 ಗಂಟೆಗಳ ವಿಚಾರಣೆ ಬಳಿಕ ಇಂದು ಅವರನ್ನು ಮುಂಬಯಿ ಸೆಶನ್ಸ್ ಕೋರ್ಟಿನ ವಿಶೇಷ ಪಿಎಂಎಲ್‌ಎ ಕೋರ್ಟ್ ಗೆ ಹಾಜರುಪಡಿಸಿದ್ದರು. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮೂರು ದಿನಗಳ ಕಾಲ ತಮ್ಮ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಿದ್ದಾರೆ.
ವಿಚಾರಣೆ ನಡೆಸಿದ ಕೋರ್ಟ್, ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿಯನ್ನು ಎರಡು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಲಾಯವು ಭುಜಬಲ್, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿ ಇವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


