ಮಲ್ಯ ಪಲಾಯನ ಪ್ರಕರಣ: ಸುಬ್ರಹ್ಮಣಿಯನ್ ಸ್ವಾಮಿ ವಿಚಾರಣೆಗೆ ಕಾಂಗ್ರೆಸ್ ಒತ್ತಾಯ
ವಿಜಯ್ ಮಲ್ಯ ದೇಶ ಬಿಟ್ಟು ಹೋಗಿರುವ ಬಗ್ಗೆ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಅವರನ್ನು ವಿಚಾರಣೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ನವದೆಹಲಿ: ಬ್ಯಾಂಕ್ ಸಾಲ ಹಿಂತಿರುಗಿಸಲಾಗದೇ ಸುಸ್ತಿದಾರರಾಗಿರುವ ವಿಜಯ್ ಮಲ್ಯ ದೇಶ ಬಿಟ್ಟು ಹೋಗಿರುವ ಬಗ್ಗೆ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಅವರನ್ನು ವಿಚಾರಣೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ವಿಜಯ್ ಮಲ್ಯ 2003 ಹಾಗೂ 2010 ರಲ್ಲಿ ಈಗ ಬಿಜೆಪಿಯೊಂದಿಗೆ ವಿಲೀನಗೊಂಡಿರುವ ಸುಬ್ರಹ್ಮಣಿಯನ್ ಸ್ವಾಮಿ ನೇತೃತ್ವದ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿದ್ದರು, ಮಲ್ಯ ಹಾಗೂ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಉತ್ತಮ ನಂಟಿರುವುದರಿಂದ ಮಲ್ಯ ದೇಶ ಬಿಟ್ಟು ಹೋಗಿರುವ ಪ್ರಕರಣದ ಬಗ್ಗೆ ಸುಬ್ರಹ್ಮಣಿಯನ್ ಸ್ವಾಮಿ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಆಗ್ರಹಿಸಿದ್ದಾರೆ.
ವಿಜಯ್ ಮಲ್ಯ ದೇಶ ಬಿಟ್ಟು ಹೋಗುವುದರ ಹಿಂದೆ ಸುಬ್ರಹ್ಮಣಿಯನ್ ಸ್ವಾಮಿ ಅವರ ಪಾತ್ರವೂ ಇದೆಯೇ ಎಂದು ಪ್ರಧಾನಿ ಅವರನ್ನು ಕೇಳಬೇಕಾಗುತ್ತದೆ ಎಂದು ಪ್ರಮೋದ್ ತಿವಾರಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


