ಏರ್ ಇಂಡಿಯಾ ವಿಮಾನ ಟಯರ್ ಸ್ಫೋಟ: 150 ಮಂದಿ ಪಾರು
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಇಳಿಯುತ್ತಿದ್ದ ಏರ್ ಇಂಡಿಯಾ ವಿಮಾನದ ಟಯರ್ ಸ್ಫೋಟಗೊಂಡಿದ್ದು...

Published On :
ಮುಂಬೈ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಇಳಿಯುತ್ತಿದ್ದ ಏರ್ ಇಂಡಿಯಾ ವಿಮಾನದ ಟಯರ್ ಸ್ಫೋಟಗೊಂಡಿದ್ದು, ಕೂದಲೆಳೆ ಅಂತರದಲ್ಲಿ ವಿಮಾನದಲ್ಲಿದ್ದ 150ಕ್ಕೂ ಅಧಿಕ ಪ್ರಯಾಣಿಕರು ಪವಾಡ ಸದೃಶವಾಗಿ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿದ್ದಂತೆ ಚಕ್ರ ಸ್ಫೋಟಗೊಂಡು, ಬೆಂಕಿ ತಗುಲಿದೆ. ಈ ವೇಳೆ ವಿಮಾನದೊಳಗೆ ಹೊಗೆ ಆವರಿಸಿದೆ. ಇದರಿಂದಾಗಿ ಪ್ರಯಾಣಿಕರಿಗೆ ಉಸಿರುಗಟ್ಟಿದಂತಾಗಿದೆ. ಆದರೆ, ಕೂಡಲೆ ಅವರನ್ನು ವಿಮಾನದಿಂದ ಹೊರಗಡೆ ಸುರಕ್ಷಿತವಾಗಿ ಕರೆತರುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ನಾಗಪುರ್ ನಿಂದ ಹೊರಟ ವಿಮಾನ ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ ಈ ಅವಘಡ ಸಂಭವಿಸಿದೆ. ವಿಮಾನದಲ್ಲಿ ಪ್ರಯಾಣಿಕರು ಹಾಗೂ ಚಾಲಕ ಸಿಬ್ಬಂದಿಗಳು ಪಾರಾಗಿದ್ದು, ಯಾವುದೇ ಪ್ರಯಾಣಿಕ ಗಾಯಗೊಂಡಿಲ್ಲ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


