ಮಾ.18ಕ್ಕೆ ಉಮರ್ ಖಾಲಿದ್, ಅನಿರ್ಬನ್ ಜಾಮೀನು ಅರ್ಜಿ ತೀರ್ಪು
ದೇಶದ್ರೋಹಿ ಘೋಷಣೆ ಕೂಗಿದ ಆರೋಪದಲ್ಲಿ ಜೈಲು ಸೇರಿರುವ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ...

Published On :
ನವದೆಹಲಿ: ದೇಶದ್ರೋಹಿ ಘೋಷಣೆ ಕೂಗಿದ ಆರೋಪದಲ್ಲಿ ಜೈಲು ಸೇರಿರುವ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಅವರ ಜಾಮೀನು ಅರ್ಜಿ ತೀರ್ಪನ್ನು ಕೋರ್ಟ್ ಮಾರ್ಚ್ 18ಕ್ಕೆ ಕಾಯ್ದಿರಿಸಿದೆ.
ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಜಾಮೀನು ಕೋರಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ಆದರೆ, ದೆಹಲಿ ಪೊಲೀಸರು ಉಮರ್ ಖಾಲೀದ್ ಮತ್ತು ಅನಿರ್ಬನ್ ಭಟ್ಟಾಯಾರ್ಯ ಅವರಿಗೆ ಜಾಮೀನು ನೀಡಬಾರದು ಎಂದು ದೆಹಲಿ ಹೈಕೋರ್ಟ್ ನಲ್ಲಿ ಮನವಿ ಮಾಡಿತ್ತು.
ವಿಡಿಯೋ ಫೂಟೇಜ್ ಆಧಾರದ ಮೇಲೆ ನಾವು ಆರೋಪಿಗಳ ವಿರುದ್ಧ ಕ್ರಮಕೈಗೊಂಡಿಲ್ಲ. ಈ ಆರೋಪಿಗಳ ವಿರುದ್ಧ 10 ಮಂದಿ ಸಾಕ್ಷಿಗಳಿದ್ದಾರೆ. ಹಾಗಾಗಿ, ಇಬ್ಬರು ವಿದ್ಯಾರ್ಥಿಗಳಿಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ ಮಾರ್ಚ್ 18ಕ್ಕೆ ತೀರ್ಪನ್ನು ಕಾಯ್ದಿರಿಸಿದೆ.
ಜೆಎನ್ ಯುನ ಈ ಇಬ್ಬರು ವಿದ್ಯಾರ್ತಿಗಳು ಫೆಬ್ರವರಿ 23ರಂದು ಪೊಲೀಸರಿಗೆ ಶರಣಾಗಿದ್ದರು. ನಾವು ನ್ಯಾಯಾಂಗ ಬಂಧನದಲ್ಲಿದ್ದು, ಹೆಚ್ಚಿನ ವಿಚಾರಣೆಯ ಅಗತ್ಯ ಇಲ್ಲ. ಹಾಗಾಗಿ ನಮಗೆ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿದಾರರು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bail pleaಜಾಮೀನು ಅರ್ಜಿJNU Rowಜೆಎನ್ ಯು ವಿವಾದUmar Khalidಉಮರ್ ಖಾಲಿದ್Anirban Bhattacharyaಅನಿರ್ಬನ್ ಭಟ್ಟಾಚಾರ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


