ತನಿಖಾ ಸಮಿತಿ ವರದಿ ತಿರಸ್ಕರಿಸಲು ಜೆಎನ್ ಯು ವಿದ್ಯಾರ್ಥಿಗಳ ನಿರ್ಧಾರ
ದೇಶದಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ..

Published On :
ನವದೆಹಲಿ: ದೇಶದಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಮಿತಿ ವರದಿಯನ್ನು ಸ್ವೀಕರಿಸದಿರಲು ಜೆಎನ್ ಯು ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ.
ಕಳೆದ ರಾತ್ರಿ ಜೆಎನ್ ಯು ವಿದ್ಯಾರ್ಥಿಗಳ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಮಿತಿ ನಡೆಸಿರುವ ತನಿಖೆ ನ್ಯಾಯಾಯುತವಾಗಿ ನಡೆದಿಲ್ಲ. ಇದೊಂದು ಅನ್ಯಾಯದ ತನಿಖಾ ವರದಿಯಾಗಿದ್ದು, ಇದನ್ನು ನಾವು ಸ್ವೀಕರಿಸುವುದಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿನ ದೇಶದ್ರೋಹ ಕಾರ್ಯಕ್ರಮದಲ್ಲಿ ವಿವಿಯ 21 ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆಂಬ ವಿವಿಯ ತನಿಖಾ ಸಮಿತಿ ವರದಿ ಹಿನ್ನೆಲೆಯಲ್ಲಿ 21 ವಿದ್ಯಾರ್ಥಿಗಳ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು.
ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ವಿಶ್ವವಿದ್ಯಾಲಯವು ಈ ಹಿಂದೆ ಉನ್ನತ ಮಟ್ಟದ ಆಂತರಿಕ ಸಮಿತಿಯನ್ನು ರಚಿಸಿತ್ತು. ಸಮಿತಿಯು ನಿನ್ನೆಯಷ್ಟೇ ತನ್ನ ತನಿಖೆಯ ವರದಿಯನ್ನು ವಿವಿಯ ಉಪಕುಲಪತಿ ಎಂ.ಜಗದೀಶ್ ಕುಮಾರ್ ಅವರಿಗೆ ಸಲ್ಲಿಸಿತ್ತು.
ವಿಶ್ವವಿದ್ಯಾಲಯದ ನಿಯಮಗಳಿಗೆ ವಿರುದ್ಧವಾಗಿ ನವೆಂಬರ್ 9ರಂದು ಅಫ್ಜಲ್ ಗುರು ಪರವಾಗಿ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿದ್ದು ನಿಜ ಎಂದು ತನಿಖಾ ಸಮಿತಿ ಒಮ್ಮತವಾಗಿ ಅಭಿಪ್ರಾಯಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


