ದೇಶ

ಲಂಡನ್ ನ ಟುಸ್ಸಾಡ್ಸ್ ನಲ್ಲಿ ಪ್ರಧಾನಿ ಮೋದಿ ಮೇಣದ ಪ್ರತಿಮೆ

ವಿಶ್ವದಲ್ಲಿ ಪ್ರಸಿದ್ಧ ವ್ಯಕ್ತಿಗಳ ಮೇಣದ ಕಲಾಕೃತಿಯನ್ನು ಹೊಂದಿರುವ ಲಂಡನ್ ನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ ಕಲಾವಿದರು ಮೋದಿ...

ಲಂಡನ್ ನ ಟುಸ್ಸಾಡ್ಸ್ ನಲ್ಲಿ ಪ್ರಧಾನಿ ಮೋದಿ ಮೇಣದ ಪ್ರತಿಮೆ
ತಮ್ಮ ಮೇಣದ ಪ್ರತಿಮೆಗೆ ಅಳತೆ ನೀಡಿದ ಪ್ರಧಾನಿ ನರೇಂದ್ರ ಮೋದಿ
Published On :
ನವದೆಹಲಿ: ವಿಶ್ವದಲ್ಲಿ ಪ್ರಸಿದ್ಧ ವ್ಯಕ್ತಿಗಳ ಮೇಣದ ಕಲಾಕೃತಿಯನ್ನು ಹೊಂದಿರುವ ಲಂಡನ್ ನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ ಕಲಾವಿದರು ಮೋದಿ ಮೇಣದ ಪ್ರತಿಮೆಯ ನಿರ್ಮಿಸುವ ಸಲುವಾಗಿ ಬುಧವಾರ ನವದೆಹಲಿಯಲ್ಲಿ ಮೋದಿ ಅವರ ಅಳತೆಯನ್ನು ತೆಗೆದುಕೊಂಡರು.
ಮೋದಿ ಅವರ ನಿವಾಸಕ್ಕೆ ಆಗಮಿಸಿದ ಕಲಾವಿದರು, ಅಳತೆಯನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರಸಿದ್ಧ ವ್ಯಕ್ತಿಗಳ ಮೇಣದ ಕಲಾಕೃತಿಗಳ ಮ್ಯೂಸಿಯಂನಲ್ಲಿ ಮೋದಿ ಅವರ ಮೇಣದ ಪ್ರತಿಮೆ ಸೇರ್ಪಡೆಗೊಳ್ಳಲಿದೆ. ರಾಜಕಾರಣದಲ್ಲಿ ನರೇಂದ್ರ ಮೋದಿ ಅವರು ಬಹುಮುಖ್ಯ ವ್ಯಕ್ತಿಯಾಗಿದ್ದಾರೆ ಎಂದು ಮ್ಯೂಸಿಯಂ ಬಣ್ಣಿಸಿದೆ. 
ಲಂಡನ್, ಸಿಂಗಾಪುರ, ಬ್ಯಾಂಕಾಕ್ ಮತ್ತು ಹಾಂಗ್ ಕಾಂಗ್ ನಲ್ಲಿರುವ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ ಶಾಖೆಯಲ್ಲಿ ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಮೇಣದ ಪ್ರತಿಮೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.