ದೇಶ

ನೀವು ಉಗ್ರರೊಂದಿಗೆ ಸಂಪರ್ಕದಲ್ಲಿದ್ರಾ? ಜ್ಯೋತಿರಾದಿತ್ಯ ಸಿಂಧಿಯಾಗೆ ಪರಿಕ್ಕರ್ ಪ್ರಶ್ನೆ

ಪಠಾಣ್ ಕೋಟ್ ದಾಳಿ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನೀವು ಉಗ್ರರೊಂದಿಗೆ ಸಂಪರ್ಕದಲ್ಲಿದ್ರಾ? ಜ್ಯೋತಿರಾದಿತ್ಯ ಸಿಂಧಿಯಾಗೆ ಪರಿಕ್ಕರ್ ಪ್ರಶ್ನೆ
ಮನೋಹರ್ ಪರಿಕ್ಕರ್
Published On :

ನವದೆಹಲಿ: ಪಠಾಣ್ ಕೋಟ್ ದಾಳಿ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ಪ್ರಶ್ನೆಗೆ ಉತ್ತರಿಸುತ್ತಿದ್ದ ಮನೋಹರ್ ಪರಿಕ್ಕರ್ ಅವರ ಅಂಕಿ-ಅಂಶಗಳ ಬಗ್ಗೆ ಸಿಂಧಿಯಾ ಅಪಸ್ವರವೆತ್ತಿದ್ದಾರೆ.  ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಿಂಧಿಯಾ ಅವರಿಗೆ ನೀವು ಉಗ್ರರೊಂದಿಗೆ ಸಂಪರ್ಕದಲ್ಲಿದ್ರಾ? ಎಂದು ಪ್ರಶ್ನಿಸಿದ್ದಾರೆ.
ಭಯೋತ್ಪಾದಕರ ದಾಳಿ ಬಗ್ಗೆ ಅಂಕಿ-ಅಂಶಗಳನ್ನು ಲೋಕಸಭೆ ಮುಂದಿಡುತ್ತಿದ್ದ ರಕ್ಷಣಾ ಸಚಿವರು ಪಠಾಣ್ ಕೋಟ್ ವಾಯು ನೆಲೆಯಲ್ಲಿ ದಾಳಿ ನಡೆಸಿದ ಉಗ್ರರು ಜನವರಿ 2 ರಂದು ಬೆಳಿಗ್ಗೆ 3 :11 ಕ್ಕೆ ವಾಯು ನೆಲೆ ಪ್ರವೇಶಿಸಿದ್ದಾರೆ ಎಂದು ಹೇಳಿದ್ದಾರೆ. ಪರಿಕ್ಕರ್ ಅವರ ಹೇಳಿಕೆಗೆ ಸಿಂಧಿಯಾ ಅಪಸ್ವರವೆತ್ತಿದ್ದಾರೆ. ಸಿಂಧಿಯಾಗೆ ಪ್ರರಿಕ್ರಿಯೆ ನೀಡಿದ ರಕ್ಷಣಾ ಸಚಿವರು "ಆ ಸಮಯದಲ್ಲಿ ಭಯೋತ್ಪಾದಕರು ಅಲ್ಲಿರಲಿಲ್ಲ ಎಂದು ಹೇಳುವುದಾದರೆ ನೀವು ಉಗ್ರರೊಂದಿಗೆ ಸಂಪರ್ಕದಲ್ಲಿದ್ರಾ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. 
ಈ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ನವರ ಪ್ರಶ್ನೆಗಳಿಗೆ ಉತ್ತರಿಸಲು ಮನೋಹರ್ ಪರಿಕ್ಕರ್ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.