ದೇಶ

ಬಿಜೆಪಿ ಸೇರಿದ ಕಾರ್ಗಿಲ್ ಹೀರೋ ಪ.ಬಂಗಾಳ ವಿಧಾನಸಭೆ ಚುನಾವಣೆಗೆ ಸ್ಪರ್ಧೆ

ಕಾರ್ಗಿಲ್ ಯುದ್ಧದ ಹೀರೋ ಕರ್ನಲ್ ದಿಪ್ತಾಂಶು ಚೌಧರಿ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷ ಸೇರಿದ್ದು,...

ಬಿಜೆಪಿ ಸೇರಿದ ಕಾರ್ಗಿಲ್ ಹೀರೋ ಪ.ಬಂಗಾಳ ವಿಧಾನಸಭೆ ಚುನಾವಣೆಗೆ ಸ್ಪರ್ಧೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕಾರ್ಗಿಲ್ ಯುದ್ಧದ ಹೀರೋ ಕರ್ನಲ್ ದಿಪ್ತಾಂಶು ಚೌಧರಿ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷ ಸೇರಿದ್ದು, ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಸನ್ಸೊಲ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಚೌಧರಿ ಅವರು ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹಾಗೂ ರಾಜ್ಯವರ್ಧನ್ ಸಿಂಗ್ ರಾಥೋರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಈ ವೇಳೆ ಪಕ್ಷದ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳ ಸಹ ಉಸ್ತುವಾರಿ ಸಿದ್ಧಾರ್ಥ್ ನಾಥ್ ಸಿಂಗ್ ಅವರು ಸಹ ಉಪಸ್ಥಿತರಿದ್ದರು.

ಚೌಧರಿ ಅವರು ಸೇನೆಯಲ್ಲಿ ದೇಶಕ್ಕಾಗಿ ಕೆಲಸ ಮಾಡಿದ ರೀತಿಯಲ್ಲೇ ಈಗ ಪಕ್ಷಕ್ಕಾಗಿ ಮತ್ತು ಪಶ್ಚಿಮ ಬಂಗಾಳ ಜನತೆಗಾಗಿ ಕೆಲಸ ಮಾಡಲಿದ್ದಾರೆ ಎಂದು ರಾಥೋರ್ ತಿಳಿಸಿದರು. ಅಲ್ಲದೆ ದಿಪ್ತಾಂಶು ಚೌಧರಿ ಅವರು ಕಾರ್ಗಿಲ್ ಯುದ್ಧದಲ್ಲಿ ಆರಂಭದಿಂದ ಅಂತ್ಯದವರೆಗೂ ಭಾಗವಹಿಸಿದ್ದರು ಎಂದು ಹೇಳಿದರು.

ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್ - ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.