ವಿರೋಧಿಗಳ ವಿರುದ್ಧ ಬೇಹುಗಾರಿಕೆ ಮಾಡುವ ಬದಲು ಸರ್ಕಾರ ನಡೆಸಿ: ಮೋದಿಗೆ ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿರೋಧಿಗಳ ವಿರುದ್ಧ ಬೇಹುಗಾರಿಕೆ ಮಾಡುವ ಬದಲು ಸರ್ಕಾರ ನಡೆಸುವ ಬಗ್ಗೆ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿರೋಧಿಗಳ ವಿರುದ್ಧ ಬೇಹುಗಾರಿಕೆ ಮಾಡುವ ಬದಲು ಸರ್ಕಾರ ನಡೆಸುವ ಬಗ್ಗೆ ಗಮನ ನೀಡಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಎನ್ ಡಿಎ ಸರ್ಕಾರ ಕೆಟ್ಟ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿರುವ ಕೇಜ್ರಿವಾಲ್ ಪ್ರಧಾನಿ ಮೋದಿ ವಿರೋಧಿಗಳ ವಿರುದ್ಧ ಬೇಹುಗಾರಿಕೆ ಮಾಡುವ ಬದಲು ಆಡಳಿತದ ಬಗ್ಗೆ ಹೆಚ್ಚು ಗಮನ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಸಿಬಿಐ ಅಧಿಕಾರಿಗಳು ತಮ್ಮ ಬಗ್ಗೆ ತಿಳಿದುಕೊಳ್ಳಲು ದೆಹಲಿ ಸರ್ಕಾರದ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಸಿಬಿಐ ಅಧಿಕಾರಿಗಳ ವಿಚಾರಣೆ ಬಗ್ಗೆ ಪ್ರಧಾನಿ ಉತ್ತರಿಸುತ್ತಾರಾ? ಸಿಬಿಐ ಪ್ರಧಾನಿಗೆ ನೇರವಾಗಿ ವರದಿ ಮಾಡುತ್ತದೆ. ಪ್ರಧಾನಿಗೆ ನನ್ನಿಂದ ಏನು ಬೇಕಾಗಿದೆ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಪ್ರಧಾನಿಯವರಿಗೆ ನನ್ನ ಬಗ್ಗೆ ಏನೇ ಮಾಹಿತಿ ಬೇಕಿದ್ದರೆ ಅದಕ್ಕಾಗಿ ಪ್ರಧಾನಿ ಒಂದು ತಂಡ ರಚಿಸಲಿ ಎಂದು ದೆಹಲಿ ಸಿಎಂ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


