ದೇಶ

ಬಿಜೆಪಿಗೆ ಅಧಿಕಾರದ ಹಸಿವು: ಅರವಿಂದ್ ಕೇಜ್ರಿವಾಲ್

ಅಧಿಕಾರದ ಹಸಿವಿನಲ್ಲಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಉತ್ತರಖಂಡದಲ್ಲಿ ಕುದುರೆ ವ್ಯಾಪರ ಶುರು ಮಾಡಿದೆ...

ಬಿಜೆಪಿಗೆ ಅಧಿಕಾರದ ಹಸಿವು: ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ಅಧಿಕಾರದ ಹಸಿವಿನಲ್ಲಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಉತ್ತರಖಂಡದಲ್ಲಿ ಕುದುರೆ ವ್ಯಾಪರ ಶುರು ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಅರುಣಾಚಲದಲ್ಲಿ ಕುದುರೆ ವ್ಯಾಪಾರ ನಡೆಸಿದ ನಂತರ, ಈಗ ಅಧಿಕಾರಕ್ಕಾಗಿ ಉತ್ತರಖಂಡದಲ್ಲಿ ಕುದುರೆ ವ್ಯಾಪಾರ ಶುರುಮಾಡಿದೆ. ಅಧಿಕಾರದ ಹಸಿವಿನಲ್ಲಿರುವ ಹಾಗೂ ಅತಿ ಭ್ರಷ್ಟ ಪಕ್ಷವೆಂದರೆ ಅದು ಬಿಜೆಪಿ. ಭ್ರಷ್ಟ ಪಕ್ಷ ಎಂದು ಸಾಬೀತುಪಡಿಸುವಲ್ಲಿ ಬಿಜೆಪಿ ನಿರತವಾಗಿದೆ ಎಂದು ಅವರು ಹೇಳಿದ್ದಾರೆ. 
ಉತ್ತರಖಂಡಾದಲ್ಲಿ ಕಾಂಗ್ರೆಸ್ ನ ಹರೀಶ್ ರಾವತ್ ನೇತೃತ್ವದ ಸರ್ಕಾರ ಪತನದ ಭೀತಿಗೆ ಸಿಲುಕಿದೆ. ಭಿನ್ನಮತೀಯ ಕಾಂಗ್ರೆಸ್ ಶಾಸಕರನ್ನು ಸೆಳೆದು ಮುಖ್ಯಮಂತ್ರಿ ಹರೀಶ್ ರಾವತ್ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. 
ಬಿಜೆಪಿಯ 26 ಶಾಸಕರು ಸೇರಿದಂತೆ ಒಟ್ಟು 35 ಶಾಸಕರು ರಾಜ್ಯಪಾಲ ಕೆ.ಕೆ. ಪಾಲ್ ಅವರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆ ಕುರಿತು ಮಾತುಕತೆ ನಡೆಸಿದ್ದಾರೆನ್ನಲಾಗಿದೆ. 70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ 36, ಬಿಜೆಪಿ 28 ಶಾಸಕರನ್ನು ಹೊಂದಿದೆ. ಪಿಡಿಎಫ್ ಮೈತ್ರಿಕೂಟ 6 ಸದಸ್ಯರನ್ನು ಹೊಂದಿದೆ. ಹೊಸ ಸರ್ಕಾರ ರಚನೆಗಾಗಿ ಬಿಜೆಪಿ ಕುದುರೆ ವ್ಯಾಪಾರ ಶುರು ಮಾಡಿದೆ ಎಂದು ಕೇಜ್ರಿವಾಲ್ ಆರೋಪಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.