ಚುನಾವಣೆಯಲ್ಲಿ ಸೋತರೇ ಕ್ರಮ ಎದುರಿಸಲು ಸಿದ್ದರಾಗಿ: ಐಎಎಸ್ ಅಧಿಕಾರಿಗಳಿಗೆ ಅಖಿಲೇಶ್ ವಾರ್ನಿಂಗ್
ಮುಂಬರುವ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ನಿಗದಿತ ಪ್ರದೇಶಗಳಲ್ಲಿ ಸಮಾಜವಾದಿ ಪಕ್ಷ ಸೋತರೇ, ಅಧಿಕಾರಿ ವರ್ಗ ಕ್ರಮ ಎದುರಿಸಲು ..

ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ನಿಗದಿತ ಪ್ರದೇಶಗಳಲ್ಲಿ ಸಮಾಜವಾದಿ ಪಕ್ಷ ಸೋತರೇ, ಅಧಿಕಾರಿ ವರ್ಗ ಕ್ರಮ ಎದುರಿಸಲು ಸಿದ್ದವಾಗಬೇಕು ಎಂದು ಸಿಎಂ ಅಖಿಲೇಶ್ ಯಾದವ್ ಎಚ್ಚರಿಕೆ ನೀಡಿದ್ದಾರೆ.
ಲಕ್ನೋದಲ್ಲಿ ನಡೆದ ಸೇವೆಗಳ ವಾರದ ಎರಡನೇ ದಿನದಲ್ಲಿ ಮಾತನಾಡಿದ ಅವರು, ಹಿಂದಿನ ಮುಖ್ಯಮಂತ್ರಿ ಮಾಯಾವತಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗಿಂತ ತಮ್ಮ ಸರ್ಕಾರ ಅಧಿಕಾರಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಿದೆ ಎಂದು ಹೇಳಿದರು.
ಸರ್ಕಾರ ತಮಗೆ ನೀಡಿರುವ ಸ್ವಾತಂತ್ರ್ಯವನ್ನು ಬಳಸಿಕೊಂಡು ಉತ್ತರ ಪ್ರದೇಶ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದರು. ಕಾನೂನು ಸುವ್ಯವಸ್ಥೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿಬೇಕು ಎಂದು ಹೇಳಿದ ಅಖಿಲೇಶ್, 2016 ನೇ ವರ್ಷವನ್ನು ರೈತರ ಕಲ್ಯಾಣಕ್ಕಾಗಿ ಮೀಸಲಿಡುವುದಾಗಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


