ಕೋಣಗಳನ್ನು ಸಾಗಿಸುತ್ತಿದ್ದ ಇಬ್ಬರು ಮುಸ್ಲಿಮರನ್ನು ಥಳಿಸಿ ಕೊಂದರು!
ಶುಕ್ರವಾರ ಇಬ್ಬರು ಮುಸ್ಲಿಮರು 8 ಕೋಣಗಳನ್ನು ಮಾರುಕಟ್ಟೆಗೆ ಕರೆದೊಯ್ಯುತ್ತಿದ್ದಾಗ ಗುಂಪೊಂದು ಆ ವ್ಯಕ್ತಿಗಳ ಮೇಲೆ ದಾಳಿ ಮಾಡಿ...

Published On :
ರಾಂಚಿ: ಶುಕ್ರವಾರ ಇಬ್ಬರು ಮುಸ್ಲಿಮರು 8 ಕೋಣಗಳನ್ನು ಮಾರುಕಟ್ಟೆಗೆ ಕರೆದೊಯ್ಯುತ್ತಿದ್ದಾಗ ಗುಂಪೊಂದು ಆ ವ್ಯಕ್ತಿಗಳ ಮೇಲೆ ದಾಳಿ ಮಾಡಿ ಹತ್ಯೆಗೈದ ಘಟನೆ ಜಾರ್ಖಂಡ್ ನಿಂದ ವರದಿಯಾಗಿದೆ.
ಲಟೇಹಾರ್ ಜಿಲ್ಲೆಯಲ್ಲಿನ ಬಲುಮತ್ ಅರಣ್ಯದಲ್ಲಿರುವ ಪ್ರಾಣಿ ರಕ್ಷಣಾ ಸಮಿತಿಯ ಸದಸ್ಯರು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮಜ್‌ಲೂಮ್ (35) ಮತ್ತು ಅಜಾದ್ ಖಾನ್ ಅಲಿಯಾಸ್ ಇಬ್ರಾಹಿಂ (15) ಎಂಬವರು ಕೋಣ ವ್ಯಾಪಾರಿಗಳಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಈ ಇಬ್ಬರು ವ್ಯಕ್ತಿಗಳು ಮಾರುಕಟ್ಟೆಗೆ ಕೋಣಗಳನ್ನು ಸಾಗಿಸುತ್ತಿದ್ದಾಗ ಜನರ ಗುಂಪು ಇವರ ಮೇಲೆ ದಾಳಿ ನಡೆಸಿದೆ. ಇವರಿಬ್ಬರಿಗೆ ಚೆನ್ನಾಗಿ ಥಳಿಸಿದ ಜನರು ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೈದು ಮರಕ್ಕೆ ತೂಗು ಹಾಕಿದ್ದಾರೆ.
ಹತ್ಯೆಗೈಯ್ಯುವ ಮುನ್ನ ಅವರ ಮೇಲೆ ತೀವ್ರವಾಗಿ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಲಟೇಹಾರ್ ಎಸ್‌ಪಿ ಅನೂಪ್ ಬಿರ್ತಾರಿ ಹೇಳಿದ್ದಾರೆ.
ಈ ಕೃತ್ಯದ ಹಿಂದೆ ಹಿಂದೂ ಸಂಘಟನೆಗಳ ಕೈವಾಡವಿದೆ ಎಂದು ಜಾರ್ಖಂಡ್ ವಿಕಾಸ್ ಮೋರ್ಚಾ(ಪ್ರಜಾತಾಂತ್ರಿಕ್) ಪಕ್ಷದ ಸ್ಥಳೀಯ ಶಾಸಕ ಪ್ರಕಾಶ್ ರಾಮ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


