ದೇಶ

ಉತ್ತರ ಪ್ರದೇಶದಲ್ಲಿ ಬಿಸಿಯೂಟ ಸೇವಿಸಿ 125 ಮಕ್ಕಳು ಅಸ್ವಸ್ಥ

ಬಿಸಿಯೂಟ ಸೇವಿಸಿ ಪ್ರಾಥಮಿಕ ಶಾಲೆಯ 125 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ...

ಉತ್ತರ ಪ್ರದೇಶದಲ್ಲಿ ಬಿಸಿಯೂಟ ಸೇವಿಸಿ 125 ಮಕ್ಕಳು ಅಸ್ವಸ್ಥ
ಸಾಂದರ್ಭಿಕ ಚಿತ್ರ
Published On :
ಬಲ್ಲಿಯಾ: ಬಿಸಿಯೂಟ ಸೇವಿಸಿ ಪ್ರಾಥಮಿಕ ಶಾಲೆಯ 125 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. 
ಅಸ್ವಸ್ಥಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಕ್ಕಳ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಮಕ್ಕಳಿಗೆ ಪೂರಿ ಸಬ್ಜಿ ನೀಡಲಾಗಿತ್ತು. ಇದನ್ನು ಸೇವಿಸುತ್ತಿದ್ದಂತೆ ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. 
ಮಕ್ಕಳಿಗೆ ಬಡಿಸಿದ್ದ ಊಟದಲ್ಲಿ ಏನೋ ಹೆಚ್ಚು ಕಡಿಮೆಯಾಗಿರಬೇಕು ಎಂದು ಹೇಳಿರುವ ಅಧಿಕಾರಿ ರಾಕೇಶ್ ಸಿಂಗ್, ಈ ಸಂಬಂಧ ನಾಲ್ವರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದ್ದು, ಇಬ್ಬರು ಅಡಿಗೆ ಭಟ್ಟರು ಸೇರಿ ಐವರನ್ನು ಸೇವೆಯಿಂದ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.