'ಭಾರತ್ ಮಾತಾಕಿ ಜೈ' ಹೇಳಲು ಭಾರತೀಯರಿಗೆ ಕಷ್ಟವಿಲ್ಲ: ಜೇಟ್ಲಿ
ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಲು ಭಾರತೀಯರಿಗೆ ಯಾವುದೇ ಕಷ್ಟವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ...

ನವದೆಹಲಿ: ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಲು ಭಾರತೀಯರಿಗೆ ಯಾವುದೇ ಕಷ್ಟವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.
ಈ ಕುರಿತಂತೆ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ 2ನೇ ದಿನದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಮಿತ್ತ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಭಾರತ್ ಮಾತಾಕಿ ಜೈ ವಿಷಯ ಕುರಿತಂತೆ ಚರ್ಚೆಗೆ ನಡೆಸಲು ಪಕ್ಷ ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.
ಅಸಮ್ಮತಿಸುವ ಜನರಿಕೆ ಸ್ವಾತಂತ್ರ್ಯ ನೀಡಲು ನಮ್ಮ ಭಾರತೀಯ ಸಂವಿಧಾನದ ಅನುಮತಿ ನೀಡುತ್ತದೆ. ಆದರೆ, ದೇಶ ಒಡೆಯುವುದನ್ನು ಎಂದಿಗು ಸಹಿಸುವುದಿಲ್ಲ. ಇದೊಂದು ಚರ್ಚಿತ ವಿಷಯವೆಂದು ನಮಗೆ ಗೊತ್ತಿದೆ. ಆದರೂ, ಪಕ್ಷ ಚರ್ಚೆ ನಡೆಸಲು ಸಿದ್ಧವಿಲ್ಲ. ಭಾರತದಲ್ಲಿರುವ ಜನರಿಗೆ ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗುವುದರಲ್ಲಿ ಕಷ್ಟವಿಲ್ಲ. ಇದಕ್ಕೆ ಉದಾಹರಣೆಯಾಗಿ ತೆಗೆದುಕೊಳ್ಳುವುದಾದರೆ ನಿನ್ನೆ ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯಾವಳಿಯನ್ನು ತೆಗೆದುಕೊಳ್ಳಬಹುದು.
ರಾಷ್ಟ್ರೀಯತೆಯ ಸಿದ್ಧಾಂತಗಳು ನಮಗೆ ನಂಬಿಕೆ ಹಾಗೂ ಮಾರ್ಗದರ್ಶನವನ್ನು ನೀಡುತ್ತದೆ. ವಾಕ್ ಸ್ವಾತಂತ್ರ್ಯಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮುಂಬರುವ ವಿಧಾನಸಭಾ ಚುನಾವಣೆ ಕುರಿತಂತೆ ಮಾತನಾಡಿರುವ ಅವರು, ಅಸ್ಸಾಂನಲ್ಲಿ ಬಿಜೆಪಿ ಶಕ್ತಿಯುತ ಪಕ್ಷವಾಗಿ ಬೆಳೆಯುತ್ತಿದೆ. ಅಸ್ಸಾಂನಲ್ಲೂ ಪಕ್ಷವು ಸರ್ಕಾರ ನಡೆಸಲಿದೆ. ಇನ್ನು ಕೇರಳದಲ್ಲಿಯೂ ನಮ್ಮ ಸದಸ್ಯರ ಸಂಖ್ಯೆ ಹೆಚ್ಚಾಗಿದೆ. ಕೇರಳದಲ್ಲಿ ಬದಲಾವಣೆಗಳನ್ನು ತರುತ್ತೇವೆ. ಪಶ್ಚಿಮ ಬಂಗಾಳದಲ್ಲಿ ನಮ್ಮ ಮತಗಳ ಬಲವನ್ನು ಹೆಚ್ಚಿಸಿಕೊಂಡಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿಯೂ ಪಕ್ಷ ಸಾಕಷ್ಟು ಅಭಿವೃದ್ಧಿ ಕಾರಣಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


