ಟ್ರಾಕ್ಟರ್'ಗೆ ಲಾರಿ ಡಿಕ್ಕಿ: 4 ಸಾವು, 9 ಗಾಯ
ಟ್ರಾಕ್ಟರ್ ಒಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 4 ನಾಲ್ಕು ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪ್ರಕಾಶಂ ಜಿಲ್ಲೆಯ ಕನಿಗಿರಿಯಲ್ಲಿ...

ಒಂಗೊಲ್: ಟ್ರಾಕ್ಟರ್ ಒಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 4 ನಾಲ್ಕು ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪ್ರಕಾಶಂ ಜಿಲ್ಲೆಯ ಕನಿಗಿರಿಯಲ್ಲಿ ಸೋಮವಾರ ನಡೆದಿದೆ.
ವೆಂಗಲಯಪಲೆಯೇ ಹಳ್ಳಿಯಲ್ಲಿರುವ ಜನರ ಗುಂಪೊಂದು ಕನಿಗಿರಿಯ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ಆಯೋಜಿಸಲಾಗಿದ್ದ ಮದುವೆಯೊಂದಕ್ಕೆ ಹೋಗಿ ಟ್ರಾಕ್ಟರ್ ನಲ್ಲಿ ಹಿಂತಿರುಗಿ ಬರುತ್ತಿದ್ದರು. ಈ ವೇಳೆ ವೇಗದಲ್ಲಿ ಬರುತ್ತಿದ್ದ ಲಾರಿಯೊಂದು ಟ್ರಾಕ್ಟರ್ ನ ಹಿಂಬದಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮತ್ತಿಬ್ಬರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನೆ ವೇಳೆ ಟ್ರಾಕ್ಟರ್ ನಲ್ಲಿದ್ದ 9 ಮಂದಿಯೂ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಲಾರಿ ಡಿಕ್ಕಿ ಹೊಡೆದಾಗ ಟ್ರಾಕ್ಟರ್ ಮುಂದೆ ಆಟೋವೊಂದು ಸಾಗುತ್ತಿದ್ದು, ಈ ವೇಳೆ ಆಟೋವಿಗೂ ಟ್ರಾಕ್ಟರ್ ಡಿಕ್ಕಿ ಹೊಡೆದಿದೆ. ಆದರೆ, ಆಟೋದಲ್ಲಿದ್ದವರಿಗಾರಿಗೂ ಯಾವುದೇ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.
ಮೃತರನ್ನು ಡಿ. ನರಸಿಂಹಿಲು (27), ಡಿ. ನರೇಶ್ (15), ಡಿ. ಮಲ್ಲಿಕಾರ್ಜುನ (15), ಡಿ. ರಾಘವಮ್ಮ (55) ಎಂದು ಗುರ್ತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


