ತಪ್ಪಾಗಿ ರಾಷ್ಟ್ರಗೀತೆ ಹಾಡಿದ್ದಾರೆ ಎಂಬ ಆರೋಪ: ಬಿಗ್ ಬಿ ವಿರುದ್ಧ ದೂರು ದಾಖಲು
ಶನಿವಾರ ಈಡೆನ್ ಗಾರ್ಡನ್ಸ್ ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆರಂಭಕ್ಕೂ ಮುನ್ನ ಬಾಲಿವುಡ್ ನಟ ಅಮಿತಾಬ್...

Published On :
ನವದೆಹಲಿ: ಶನಿವಾರ ಈಡೆನ್ ಗಾರ್ಡನ್ಸ್ ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆರಂಭಕ್ಕೂ ಮುನ್ನ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ರಾಷ್ಟ್ರಗೀತೆ ಹಾಡಿದ್ದರು.
ರಾಷ್ಟ್ರಗೀತೆ ಆಲಾಪನೆಗೆ ಬಿಗ್ ಬಿ ರು. 4 ಕೋಟಿ ಪಡೆದಿದ್ದರು ಎಂಬ ಆರೋಪ ಕೇಳಿ ಬಂದು ವಿವಾದ ಸೃಷ್ಟಿಯಾದಾಗ, ಅವರು ಇದಕ್ಕಾಗಿ ನಯಾ ಪೈಸೆ ಪಡೆದಿಲ್ಲ ಎಂದು ಸಿಎಬಿ ಮುಖ್ಯಸ್ಥ ಸೌರವ್ ಗಂಗೂಲಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಆ ವಿವಾದ ಅಂತ್ಯಕಂಡಿತ್ತು.
ಇದೀಗ ಅಮಿತಾಬ್ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದಾರೆ ಎಂಬುದು ಹೊಸ ಆರೋಪ. ಅಮಿತಾಬ್ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದುದರ ವಿರುದ್ಧ ದೆಹಲಿಯ ಅಶೋಕ್ ನಗರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತAmitabh Bachchanಅಮಿತಾಬ್ ಬಚ್ಚನ್Pakistanಪಾಕಿಸ್ತಾನnational anthemರಾಷ್ಟ್ರಗೀತೆICC T20 World Cupಐಸಿಸಿ ಟಿ 20 ವಿಶ್ವಕಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


