ದೇಶ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ: ಅರುಣ್ ಜೇಟ್ಲಿ- ಮೆಹಬೂಬಾ ಮುಫ್ತಿ ಭೇಟಿ ಸಾಧ್ಯತೆ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಮುಂದುವರೆಸುವ ವಿಷಯ ಕಗ್ಗಂಟಾಗಿಯೇ ಉಳಿದಿದ್ದು, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ: ಅರುಣ್ ಜೇಟ್ಲಿ- ಮೆಹಬೂಬಾ ಮುಫ್ತಿ ಭೇಟಿ ಸಾಧ್ಯತೆ
ಮೆಹಬೂಬಾ ಮುಫ್ತಿ
Published On :

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಮುಂದುವರೆಸುವ ವಿಷಯ ಕಗ್ಗಂಟಾಗಿಯೇ ಉಳಿದಿದ್ದು, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.  

ಸರ್ಕಾರ ರಚನೆ ಸಂಬಂಧ ಮೆಹಬೂಬಾ ಮುಫ್ತಿ ಸದ್ಯದಲ್ಲೇ ಪಿಡಿಪಿ ನಾಯಕರ ಸಭೆಯನ್ನು ಕರೆಯಲಿದ್ದಾರೆ ಇದಕ್ಕೂ ಮುನ್ನ ನವದೆಹಲಿಗೆ ತೆರಳಲಿರುವ ಅವರು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಮಾತನಾಡಲಿದ್ದಾರೆ ಎಂದು ಪಿಡಿಪಿ ಪಕ್ಷದಿಂದ ಮಾಧ್ಯಮಗಳಿಗೆ ಮಾಹಿತಿ ದೊರೆತಿದೆ. ಕಣಿವೆ ರಾಜ್ಯದಲ್ಲಿ ಎದುರಾಗಿರುವ ಸರ್ಕಾರ ರಚನೆ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅರುಣ್ ಜೇಟ್ಲಿ, ಜಮ್ಮು-ಕಾಶ್ಮೀರದ ಆಡಳಿತ ಕಾರ್ಯಸೂಚಿಗೆ ಬಿಜೆಪಿ ಬದ್ಧವಾಗಿದೆ ಎಂದು ಹೇಳಿದ್ದರು.

ಮೈತ್ರಿ ಸರ್ಕಾರ ಮುಂದುವರೆಸುವ ಬಗ್ಗೆ ಪಿಡಿಪಿ-ಬಿಜೆಪಿ ನಾಯಕರು ಸಕಾರಾತ್ಮಕ ಹೇಳಿಕೆ ನೀಡುತ್ತಿದ್ದರೂ ಈ ವರೆಗೂ ಸರ್ಕಾರ ರಚನೆಗೆ ಸಂಬಂಧಿಸಿದ ಬೆಳವಣಿಗೆಗಳು ನಡೆದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.