ದೇಶ

ರಾಜ್ಯದಲ್ಲೇ ಇದ್ದು ಪರಿಸ್ಥಿತಿ ನಿಭಾಯಿಸಲು ರಾವತ್ ಗೆ ರಾಹುಲ್ ಸೂಚನೆ

ಉತ್ತರಾಖಂಡ ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಮತ್ತು ಅಲ್ಲಿನ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಮುಖಂಡರೊಂದಿಗೆ...

ರಾಜ್ಯದಲ್ಲೇ ಇದ್ದು ಪರಿಸ್ಥಿತಿ ನಿಭಾಯಿಸಲು ರಾವತ್ ಗೆ ರಾಹುಲ್ ಸೂಚನೆ
ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್
Published On :

ನವದೆಹಲಿ: ಉತ್ತರಾಖಂಡ ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಮತ್ತು ಅಲ್ಲಿನ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಹರೀಶ್ ರಾವತ್ ಸೋಮವಾರ ದೆಹಲಿಗೆ ಬರುವುದರಲ್ಲಿದ್ದರು. ಆದರೆ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಅವರನ್ನು ಅಲ್ಲಿಯೇ ಉಳಿದುಕೊಂಡು ಪರಿಸ್ಥಿತಿ ನಿಭಾಯಿಸುವಂತೆ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ 9 ಮಂದಿ ಕಾಂಗ್ರೆಸ್ ಶಾಸಕರು ಬಂಡಾಯವೆದ್ದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅದೀಗ 28ರೊಳಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಿದೆ. ಈ ಮಧ್ಯೆ 27 ಸದಸ್ಯ ಬಲವನ್ನು ಹೊಂದಿರುವ ಬಿಜೆಪಿ ಸರ್ಕಾರ ಸರ್ಕಾರ ರಚಿಸಲು ತಮಗೆ ಹಕ್ಕು ನೀಡಬೇಕೆಂದು ರಾಜ್ಯಪಾಲರ ಮೊರೆ ಹೋಗಿದೆ.
ಇಂದು ಸಂಜೆ ಬಿಜೆಪಿಯ 35 ನಾಯಕರು ಮತ್ತು ಬಂಡಾಯ ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಮನವಿ ಮಾಡಲಿದ್ದಾರೆ.

ಬಹುಮತ ಕಳೆದುಕೊಂಡಿರುವುದರಿಂದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಯವರನ್ನು ಮನವಿ ಮಾಡಲಿದ್ದೇವೆ. ಅಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿ ಹರೀಶ್ ರಾವತ್ ಅವರು ಹತಾಶೆಯಿಂದ ಶಾಸಕರ ಬೆಂಬಲ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ಆ ಕಾರ್ಯದಲ್ಲಿ ಯಶಸ್ವಿಯಾಗುವುದಿಲ್ಲ. ಅವರ ಭ್ರಷ್ಟಾಚಾರ ಅವರನ್ನು ಈ ಮಟ್ಟಕ್ಕೆ ಇಳಿಸಿದೆ ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯ್ ವಾರ್ಗಿಯಾ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.