ದೇಶ

ಕಾಂಗ್ರೆಸ್ ತನ್ನಲ್ಲಿರುವ ಭಯವನ್ನು ದೇಶದ ಮೇಲೆ ಹೇರಲು ಯತ್ನಿಸುತ್ತಿದೆ: ಬಿಜೆಪಿ

ಖಿನ್ನತೆಗೊಳಗಾಗಿರುವ ಕಾಂಗ್ರೆಸ್ ರಾಜಕೀಯ ಲಾಭ ಪಡೆಯುವ ಸಲುವಾಗಿ ಜನರಲ್ಲಿ ಅಪನಂಬಿಕೆ ಸೃಷ್ಟಿಸಿ, ತನ್ನಲ್ಲಿರುವ ಭಯವನ್ನು ದೇಶದ ಮೇಲೆ ಹೇರಲು ಯತ್ನಿಸುತ್ತಿದೆ...

ಕಾಂಗ್ರೆಸ್ ತನ್ನಲ್ಲಿರುವ ಭಯವನ್ನು ದೇಶದ ಮೇಲೆ ಹೇರಲು ಯತ್ನಿಸುತ್ತಿದೆ: ಬಿಜೆಪಿ
ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ (ಸಂಗ್ರಹ ಚಿತ್ರ)
Published On :

ನವದಹೆಲಿ: ಖಿನ್ನತೆಗೊಳಗಾಗಿರುವ ಕಾಂಗ್ರೆಸ್ ರಾಜಕೀಯ ಲಾಭ ಪಡೆಯುವ ಸಲುವಾಗಿ ಜನರಲ್ಲಿ ಅಪನಂಬಿಕೆ ಸೃಷ್ಟಿಸಿ, ತನ್ನಲ್ಲಿರುವ ಭಯವನ್ನು ದೇಶದ ಮೇಲೆ ಹೇರಲು ಯತ್ನಿಸುತ್ತಿದೆ ಎಂದು ಬಿಜೆಪಿ ಸೋಮವಾರ ಹೇಳಿಕೊಂಡಿದೆ.

ಈ ಕುರಿತಂತೆ ಮಾತನಾಡಿರುವ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು, ರಾಷ್ಟ್ರೀಯತೆ ಕುರಿತಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ನೀಡಿದ್ದ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಯಾವುದೇ ಸಮಸ್ಯೆಯಿಲ್ಲ.

ಸೋಲಿನಿಂದ ಕಂಗೆಟ್ಟು ಖಿನ್ನತೆಗೊಳಗಾಗಿರುವ ಕಾಂಗ್ರೆಸ್ ಇನ್ನು ತನ್ನ ನೋವಿನಿಂದ ಹೊರಬಂದಿಲ್ಲ. ಭಯ ಹುಟ್ಟಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷವೇ ಇಂದು ಭಯದಲ್ಲಿದೆ. ತನ್ನಲ್ಲಿರುವ ಭಯವನ್ನೇ ದೇಶದ ಜನತೆ ಮೇಲೆ ಹೇರಲು ಯತ್ನಿಸುತ್ತಿದೆ. ಆದರೆ ಇದರಿಂದ ಕಾಂಗ್ರೆಸ್ ಗೆ ಯಾವುದೇ ಸಹಾಯವಾಗುವುದಿಲ್ಲ, ಯಾವುದೇ ಲಾಭ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಇಂದು ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಭಾರತ್ ಮಾತಾ ಕಿ ಜೈ ಎಂದು ಹೇಳಿದರೆ ಮಾತ್ರವೇ ಆತ ರಾಷ್ಟ್ರವಾದಿ ಎಂದು ನಾನು ಹೇಳುವುದಿಲ್ಲ. ಆದರೆ, ದೇಶದ ಪರವಾಗಿರುವ ಘೋಷಣಿಗಳಿಗೆ ಅಗೌರವ ತೋರಿದರೆ ಅದು ರಾಷ್ಟ್ರವಿರೋಧಿ ಎಂದು ಹೇಳಲಾಗುತ್ತದೆ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಜೆಎನ್ ಯು ವಿವಿಯಲ್ಲಿ ಆಯೋಜಿಸಲಾಗಿದ್ದ ಜೆಎನ್ ಯು ಹಾಗೂ ರಾಷ್ಟ್ರೀಯತೆ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಶಶಿ ತರೂರ್ ಅವರು, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯತೆ ಎಂಬುದು ಭಾರತ್ ಮಾತಾ ಕಿ ಜೈ ಎಂದು ಹೇಳುತ್ತೇವೋ ಇಲ್ಲವೋ ಎಂಬುದರ ಮೇಲೆ ನಿರ್ಧಾರವಾಗುತ್ತಿದೆ. ಭಾರತ್ ಮಾತಾ ಕಿ ಜೈ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಆದರೆ ಇತರರನ್ನು ಆ ಘೋಷಣೆ ಕೂಗುವಂತೆ ಒತ್ತಾಯ ಮಾಡಬೇಕಾ ಎಂದು ಪ್ರಶ್ನಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.