ದೇಶ

ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆಗೆ ಸಿಎಂ ನಿರ್ಧಾರದ ಬಗ್ಗೆ ಸೋನಿಯಾ ಗರಂ

ರಾಜ್ಯದಲ್ಲಿ ಲೋಕಾಯುಕ್ತವನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸ್ಥಾಪನೆ ಮಾಡುವ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸಮಾಧಾನಗೊಂಡಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆಗೆ ಸಿಎಂ ನಿರ್ಧಾರದ ಬಗ್ಗೆ ಸೋನಿಯಾ ಗರಂ
ಸೋನಿಯಾ ಗಾಂಧಿ
Published On :

ಬೆಂಗಳೂರು: ರಾಜ್ಯದಲ್ಲಿ ಲೋಕಾಯುಕ್ತವನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸ್ಥಾಪನೆ ಮಾಡುವ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸಮಾಧಾನಗೊಂಡಿದ್ದಾರೆ.

ಪಕ್ಷದಲ್ಲಿನ ಇತರ ನಾಯಕರ ಅಭಿಪ್ರಾಯ ಪಡೆಯದೇ ಎಸಿಬಿ ಸ್ಥಾಪನೆಗೆ ಮುಂದಾಗಿರುವುದರಿಂದ ಸಿದ್ದರಾಮಯ್ಯ ಹೈಕಮಾಂಡ್ ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಲೆಂದೇ ಭ್ರಷ್ಟಾಚಾರ ನಿಗ್ರಹ ದಳ ಪ್ರಾರಂಭ ಮಾಡುತ್ತಿದ್ದಾರೆ ಎಂಬ ಆರೋಪ ವಿಪಕ್ಷಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಬಳಿ ಸೋನಿಯಾ ಗಾಂಧಿ ರಾಜ್ಯ ಸರ್ಕಾರ ಎಸಿಬಿ ಸ್ಥಾಪನೆಗೆ ಕೈಗೊಂಡಿರುವ ನಿರ್ಧಾರದ ಕುರಿತು ಅಸಮಾಧಾನ ಹೊರಹಾಕಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆ ಬಗ್ಗೆ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಎಸ್ ಕೃಷ್ಣ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ನಾಯಕರ ಅಸಮಾಧಾನ ಹೈಕಮಾಂಡ್ ವರೆಗೂ  ತಲುಪಿದ್ದು, ಸಿದ್ದರಾಮಯ್ಯ ಕಾರ್ಯವೈಖರಿ ಬಗ್ಗೆ ಮತ್ತೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ. ಸೋನಿಯಾ ಗಾಂಧಿ ತೀವ್ರ ಅಸಮಾಧಾನಗೊಂದಿರುವ ಹಿನ್ನೆಲೆಯಲ್ಲಿ ತಮ್ಮ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಅಧಿವೇಶನದ ನಂತರ ಹೈಕಮಾಂಡ್ ಗೆ ಸ್ಪಷ್ಟನೆ ನಿಡುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.