ಕಾಲ ಮಿಂಚಿಲ್ಲ, ಎಸಿಬಿ ರಚನೆ ಕುರಿತು ಪುನರಾವಲೋಕನ ಮಾಡಿ: ಎಸ್ ಎಂ ಕೃಷ್ಣ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಕುರಿತು ಸರ್ಕಾರ ಪುನರಾವಲೋಕನ ಮಾಡುವುದು ಸೂಕ್ತ ಎಂದು ಮಾಜಿ...

Published On :
ಮೈಸೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಕುರಿತು ಸರ್ಕಾರ ಪುನರಾವಲೋಕನ ಮಾಡುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹೇಳಿದ್ದಾರೆ.
ಅಧಿಕಾರಶಾಹಿ ನಡೆಸುವ ಭ್ರಷ್ಟಾಚಾರದ ಬಗ್ಗೆ ಅಧಿಕಾರಶಾಹಿ(ಎಸಿಬಿ) ವ್ಯವಸ್ಥೆಯೇ ತನಿಖೆ ನಡೆಸುವುದು ಸರಿಯಲ್ಲ. ಹಾಗಾಗಿ, ಇನ್ನು ಕಾಲ ಮಿಂಚಿಲ್ಲ, ಸರ್ಕಾರ ಎಸಿಬಿ ರಚನೆ ಕುರಿತು ಪುನರಾವಲೋಕನ ಮಾಡುವುದು ಒಳಿತು ಎಂದು ಅವರು ತಿಳಿಸಿದ್ದಾರೆ.
ಭ್ರಷ್ಟ ಅಧಿಕಾರಿಗಳಿಂದ ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಹಗರಣಗಳು ನಡೆದಿವೆ. ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಿದರೆ, ಅದು ಆಗುವುದಿಲ್ಲ. ಭ್ರಷ್ಟ ಅಧಿಕಾರಿಗಳನ್ನು ನೇಮಿಸಿದ್ದರಿಂದ ಈ ರೀತಿಯ ಹಗರಣಗಳಾಗಿವೆ. ನ್ಯಾ.ವೆಂಕಾಟಚಲಯ್ಯ ಮತ್ತು ನ್ಯಾ.ಸಂತೋಷ್ ಹೆಗಡೆ ಅಂತಹವರು ಸಂಸ್ಥೆಗೆ ಒಳ್ಳೆ ಹೆಸರನ್ನು ತಂದುಕೊಟ್ಟಿದ್ದಾರೆ. ಹಾಗಾಗಿ, ಎಸಿಬಿ ಸ್ಥಾಪನೆ ಸರಿಯಲ್ಲ ಎಂದು ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


