ದಲಿತನ ಮರ್ಯಾದಾ ಹತ್ಯೆ: ಕೌಸಲ್ಯ ಹೇಳಿಕೆ ದಾಖಲಿಸಿಕೊಂಡ ಅಧಿಕಾರಿಗಳು
ದಲಿತನೋರ್ವ ತಮ್ಮ ಜಾತಿಯ ಹುಡುಗಿಯನ್ನು ವಿವಾಹವಾಗಿದ್ದಾನೆಂಬ ಕಾರಣಕ್ಕೆ ಯುವಕನನ್ನು ನಡುರಸ್ತೆಯಲ್ಲೇ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ...

ತಮಿಳುನಾಡು: ದಲಿತನೋರ್ವ ತಮ್ಮ ಜಾತಿಯ ಹುಡುಗಿಯನ್ನು ವಿವಾಹವಾಗಿದ್ದಾನೆಂಬ ಕಾರಣಕ್ಕೆ ಯುವಕನನ್ನು ನಡುರಸ್ತೆಯಲ್ಲೇ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಹತ್ಯೆಗೀಡಾದ ಯುವಕನ ಪತ್ನಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ದಲಿತನನ್ನು ಹತ್ಯೆ ಮಾಡಿದ ದಿನದಂದು ಆತನ ಪತ್ನಿಯ ಕೌಸಲ್ಯ ಮೇಲೂ ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕೌಸಲ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೌಸಲ್ಯ ಚೇತರಿಸಿಕೊಂಡಿದ್ದು, ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಮ್ಯಾಜಿಸ್ಟ್ರೇಟ್ ಜಿ. ಕೃಷ್ಣನ್ ಅವರು ಕೌಸಲ್ಯ ನೀಡಿದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಕೌಸಲ್ಯ ವಿಚಾರಣೆ ವೇಳೆ ಅಲ್ಲಿನ ಸಿಬ್ಬಂದಿಗಳಿಗೂ ಅವಕಾಶ ನೀಡದೆ ನ್ಯಾಯಾಲಯವು ಒಂದೂವರೆ ಗಂಟೆಗಳ ಧೀರ್ಘಾವಧಿ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಪತಿ ಹತ್ಯೆಯಾದ ನಂತರ ಹೇಳಿಕೆ ನೀಡಿದ್ದ ಕೌಸಲ್ಯ ಅವರು, ದಾಳಿಕೋರರು ನನ್ನ ಎದುರಿಗೆ ಬಂದರೆ ಗುರ್ತಿಸುತ್ತೇನೆಂದು ಹೇಳಿದ್ದರೆಂದು ಪೊಲೀಸರು ಹೇಳಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ದಲಿತ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ಸಿಸಿಟಿವಿಯ ದೃಶ್ಯವೊಂದು ಸಾಕಷ್ಟು ಸುದ್ದಿ ಮಾಡಿತ್ತು.
ತಮಿಳುನಾಡಿದ ತಿರುಪ್ಪೊರಿನ ಉದುಮಲೈಪೆಟ್ಟೈಯಲ್ಲಿ ಘಟನೆ ನಡೆದಿತ್ತು. ತನ್ನ ಮಡದಿಯೊಂದಿಗೆ ರಸ್ತೆ ದಾಟುವ ವೇಳೆ ವಾಹನದಲ್ಲಿ ಬಂದಿರುವ ವ್ಯಕ್ತಿಗಳು ನಡುರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂತರ ಯುವಕನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತಾದರೂ ಯುವಕ ಸಾವನ್ನಪ್ಪಿದ್ದ
ಶಂಕರ್ ಹತ್ಯೆಯಾಗಿದ್ದ ಯುವಕನಾಗಿದ್ದು, ಪೊಲ್ಲಾಚಿಯಲ್ಲಿ ಮೊದಲೇ ವರ್ಷದ ಎಂಜಿನಿಯರಿಂಗ ಓದುತ್ತಿದ್ದ. ಕೌಸಲ್ಯ ಉದಾಮಲ್ ಪೇಟೆಯಲ್ಲ ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯಾಗಿದ್ದಳು. ಕೌಸಲ್ಯ ಮೇಲ್ಜಾತಿಯ ಯುವತಿಯಾಗಿದ್ದು ಅವರ ಕುಟುಂಬಕ್ಕ ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತಪಡಿಸಿತ್ತು. ಇದರ ನಡುವೆಯೂ ಶಂಕರ್ ಕೌಸಲ್ಯಳನ್ನು ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಕೌಸಲ್ಯ ಸಂಬಂಧಿಕರು ಶಂಕರ್ ಮೇಲೆ ದಾಳಿ ಮಾಡಿದ್ದಾರೆನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


