ಕೃಷಿ ಕ್ಷೇತ್ರದ ಕ್ಷಿಪ್ರ ಬೆಳವಣಿಗೆಯಿಂದ ಬಡತನ ನಿರ್ಮೂಲನೆ ಸಾಧ್ಯ: ಅರುಣ್ ಜೇಟ್ಲಿ
ಬಡತನ ನಿರ್ಮೂಲನೆಯಾಗಬೇಕಾದರೆ ದೇಶದ ಕೃಷಿ ಕ್ಷೇತ್ರ ಕ್ಷಿಪ್ರಗತಿಯಲ್ಲಿ ಬೆಳವಣಿಗೆಯಾಗಬೇಕಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

Published On :
ಮುಂಬೈ: ಬಡತನ ನಿರ್ಮೂಲನೆಯಾಗಬೇಕಾದರೆ ದೇಶದ ಕೃಷಿ ಕ್ಷೇತ್ರ ಕ್ಷಿಪ್ರಗತಿಯಲ್ಲಿ ಬೆಳವಣಿಗೆಯಾಗಬೇಕಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿರುವ ಅರುಣ್ ಜೇಟ್ಲಿ, ಬಡತನ ನಿರ್ಮೂಲನೆ ಮಾಡುವುದರೊಂದಿಗೆ ದೇಶದ ಜಿಡಿಪಿ ಹೆಚ್ಚಿಸುವುದಕ್ಕೆ ಹಾಗೂ ಅರ್ಥ ವ್ಯವಸ್ಥೆಗೆ ಕೃಷಿ ಕ್ಷೇತದ ಕ್ಷಿಪ್ರ ಬೆಳವಣಿಗೆ ಸಹಕಾರಿ ಎಂದಿದ್ದು ಪ್ರಸಕ್ತ ವರ್ಷದಲ್ಲಿ ಕ್ಷೀಣಿಸಿರುವ ಮುಂಗಾರು ಕೃಷಿ ಕ್ಷೇತ್ರವನ್ನು ಪರೀಕ್ಷೆಗೆ ಒಡ್ಡಲಿರುವ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಇತ್ತೀಚಿಗೆ ಪ್ರಾರಂಭವಾದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಮಾತನಾಡಿರುವ ಜೇಟ್ಲಿ, ಫಸಲ್ ಭೀಮಾ ಯೋಜನೆ ಕೃಷಿ ವಲಯದಲ್ಲಿನ ಸಮಸ್ಯೆಗಳನ್ನು, ರೈತರ ಆತ್ಮಹತ್ಯೆಗಳನ್ನು ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


