ಪ್ರಚೋದನಕಾರಿ ಹೇಳಿಕೆ: ಬಿಜೆಪಿ ನಾಯಕಿ ಕುಂದನಿಕ ಶರ್ಮಾ ಬಂಧನ
ವಿಹೆಚ್ ಪಿ ನಾಯಕ ಅರುಣಿ ಮಹೌರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ...

ಆಗ್ರಾ: ವಿಹೆಚ್ ಪಿ ನಾಯಕ ಅರುಣಿ ಮಹೌರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕಿ ಕುಂದನಿಕ ಶರ್ಮಾ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ವೈದ್ಯಕೀಯ ತಪಾಸಣೆಯ ನಂತರ ಕುಂದನಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ್ದ ನ್ಯಾಯಲಾಯವು ಕುಂದನಿಕ ಅವರಿಗೆ ಏ.2 ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ಕುಂದನಿಕ ಅವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ ನೂನೂರು ಬಿಜೆಪಿ ಬೆಂಬಲಿಗರು ನ್ಯಾಯಾಲಯದ ಅವರಣದಲ್ಲಿ ಘೋಷಣೆಗಳನ್ನು ಕೂಗುತ್ತಿದ್ದು. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಿರಲೆಂದು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಇದೀಗ ಕುಂದನಿಕ ಅವರಿಗೆ ಜಾಮೀನು ದೊರೆತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,
40 ವರ್ಷದ ವಿಹೆಚ್ ಪಿ ನಾಯಕ ಅರುಣ್ ಕುಮಾರ್ ಅವರು ಕಳೆದ ತಿಂಗಳು ದೇವಸ್ಥಾನವೊಂದಕ್ಕೆ ಹೋಗಿ ಮನೆಗೆ ಬರುತ್ತಿದ್ದರು. ಈ ವೇಳೆ ದುಷ್ಕರ್ಮಿಗಳ ಗುಂಪೊಂದು ಅವರನ್ನು ಹತ್ಯೆ ಮಾಡಿತ್ತು. ಅರುಣ್ ಅವನರ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


