ಓಮರ್ ಅದ್ಬುಲ್ಲಾ- ಕಾಶ್ಮೀರ ರಾಜ್ಯಪಾಲರ ಭೇಟಿ: ಮಧ್ಯಂತರ ಚುನಾವಣೆಗೆ ಎನ್ ಸಿ ಒಲವು
ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರೆದಿರುವ ಹಿನ್ನೆಲೆಯಲ್ಲಿ ಎನ್ ಸಿ ನಾಯಕ, ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ರಾಜ್ಯಪಾಲ ಎನ್ಎನ್ ವೋಹ್ರಾ ಅವರನ್ನು ಭೇಟಿ ಮಾಡಿದ್ದಾರೆ.

Published On :
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರೆದಿರುವ ಹಿನ್ನೆಲೆಯಲ್ಲಿ ಎನ್ ಸಿ ನಾಯಕ, ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ರಾಜ್ಯಪಾಲ ಎನ್ಎನ್ ವೋಹ್ರಾ ಅವರನ್ನು ಭೇಟಿ ಮಾಡಿದ್ದಾರೆ.
ಸರ್ಕಾರ ರಚನೆಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಪರ್ಯಾಯ ಮಾರ್ಗದ ಸಲಹೆ ನೀಡುವುದಿಲ್ಲ, ಬದಲಾಗಿ ರಾಜ್ಯದಲ್ಲಿ ಮತ್ತೊಮ್ಮೆ ಚುನಾವಣೆ ಎದುರಿಸುವುದರ ಪರವಾಗಿದೆ ಎಂದು ಓಮರ್ ಅಬ್ದುಲ್ಲಾ ರಾಜ್ಯಪಾಲರಿಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಯಾರಿಗೂ ಮಧ್ಯಂತರ ಚುನಾವಣೆ ಬೇಕಿಲ್ಲ. ಆದರೆ ಸರ್ಕಾರ ರಚನೆ ಸಾಧ್ಯವಾಗದೇ ಇದ್ದರೆ, ಮಧ್ಯಂತರ ಚುನಾವಣೆಯೊಂದೇ ಮಾರ್ಗ ಎಂದು ಓಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ನವದೆಹಲಿಗೆ ತೆರಳಿ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸುವುದು ಮೆಹಬೂಬಾ ಮುಫ್ತಿ ಅವರ ಕೊನೆಯ ಪ್ರಯತ್ನವಾಗಿದೆ. ಪಕ್ಷವನ್ನು ಉಳಿಸಿಕೊಳ್ಳಲು ಮೆಹಬೂಬಾ ಮುಫ್ತಿ ಈ ರೀತಿಯ ಯತ್ನ ನಡೆಸುತ್ತಿದ್ದಾರೆ. ಬಿಜೆಪಿಯ ಷರರ್ತ್ತುಗಳಿಗೆ ಅನುಗುಣವಾಗಿ ಸರ್ಕಾರ ರಚನೆ ಸಾಧ್ಯವಾಗದೇ ಇದ್ದರೆ ಪಿಡಿಪಿ ಪಕ್ಷ ಇಬ್ಭಾಗವಾಗುತ್ತದೆ, ಹಾಗಾದರೆ ಮತ್ತಷ್ಟು ದುರ್ಬಲವಾಗುತ್ತೇನೆ ಎಂಬುದು ಮೆಹಬೂಬಾ ಮುಫ್ತಿ ಅವರಿಗೆ ಅರ್ಥವಾಗಿದೆ ಎಂದು ಓಮರ್ ಅಬ್ದುಲ್ಲಾ ರಾಜ್ಯಪಾಲರ ಭೇಟಿ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ- ಮೆಹಬೂಬಾ ಮುಫ್ತಿ ಭೇಟಿ ಬಳಿಕ ಸರ್ಕಾರ ರಚನೆ ಸಾಧ್ಯವಾಗಲಿದೆ ಎಂಬ ವಿಶ್ವಾಸವಿದೆ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸರ್ಕಾರGovernmentgovernorರಾಜ್ಯಪಾಲJammu and KashmirOmar Abdullahಜಮ್ಮು-ಕಾಶ್ಮೀರಓಮರ್ ಅಬ್ದುಲ್ಲಾmid-term electionsಮಧ್ಯಂತರ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


