ದೇಶ

ಜಮ್ಮು-ಕಾಶ್ಮೀರ ಸರಕಾರ ರಚನೆ: ಅಂತಿಮ ನಿರ್ಧಾರ ಕೈಗೊಳ್ಳಲು ಪಿಡಿಪಿ ಸಭೆ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಸಂಬಂಧ ಪಿಡಿಪಿ ಶಾಸಕರು ಇಂದು ಸಭೆ ನಡೆಸಲಿದ್ದು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಜಮ್ಮು-ಕಾಶ್ಮೀರ ಸರಕಾರ ರಚನೆ: ಅಂತಿಮ ನಿರ್ಧಾರ ಕೈಗೊಳ್ಳಲು ಪಿಡಿಪಿ ಸಭೆ
ಜಮ್ಮು-ಕಾಶ್ಮೀರ ಸರಕಾರ ರಚನೆ: ಅಂತಿಮ ನಿರ್ಧಾರ ಕೈಗೊಳ್ಳಲಿ ಪಿಡಿಪಿ ಸಭೆ
Published On :

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಸಂಬಂಧ ಪಿಡಿಪಿ ಶಾಸಕರು ಇಂದು ಸಭೆ ನಡೆಸಲಿದ್ದು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಪಿಡಿಪಿ-ಬಿಜೆಪಿ ಮೈತ್ರಿ ಮುಂದುವರೆಸುವುದರ ಬಗ್ಗೆಯೂ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಮಾ.22 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ಮೈತ್ರಿ ಸರ್ಕಾರ ಮುಂದುವರೆಸುವ ಬಗ್ಗೆ ಮಾತುಕತೆ ನಡೆಸಿದ್ದರು.

ಮಾತುಕತೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಮೆಹಬೂಬಾ ಮುಫ್ತಿ, ಪ್ರಧಾನಿಯೊಂದಿಗಿನ ಮಾತುಕತೆ ಸಕಾರಾತ್ಮಕವಾಗಿತ್ತು, ಶೀಘ್ರವೇ ಕಾಶ್ಮೀರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟನ್ನು ಅಂತ್ಯಗೊಳಿಸಲು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು. ಏತನ್ಮಧ್ಯೆ ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋಹ್ರಾ ಪಿಡಿಪಿ ಹಾಗೂ ಬಿಜೆಪಿ ಮುಖಂಡರ ಪ್ರತ್ಯೇಕ ಸಭೆ ಕರೆದಿದ್ದಾರೆ. ಸರ್ಕಾರ ರಚನೆ ಸಂಬಂಧ ಪಿಡಿಪಿಯ ಹೊಸ ಷರತ್ತುಗಳಿಗೆ ಒಪ್ಪಿಗೆ ಸೂಚಿಸಿಲ್ಲ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.